ಬೆಂಗಳೂರು: ಬೆಂಗಳೂರಲ್ಲಿ ಇತ್ತೀಚಿಗೆ ಹಿಟ್ ಆಂಡ್ ರನ್ ಕೇಸ್ ಪ್ರಕರಣಗಳು ಹೆಚ್ಚಾಗುತ್ತಿದ್ದೂ, ಇದೀಗ ನಗರದ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಸಂಭವಿಸಿದ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಹಾಗೂ ಹಿಂಬದಿ ಸವಾರಿಣಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ.
‘ಶುಚಿ ಯೋಜನೆ’ಗೆ ಮರುಚಾಲನೆ: ಇನ್ಮುಂದೆ ವಿದ್ಯಾರ್ಥಿನಿಯರಿಗೆ ‘ಉಚಿತ ಸ್ಯಾನಿಟರಿ ಪ್ಯಾಡ್’ ವಿತರಣೆ
ಮಡಿವಾಳ ಕೆರೆ ಸಮೀಪದ ನಿವಾಸಿಗಳಾದ ಸವಾರ ಅಭಿನಂದನ್ (25) ಮತ್ತು ಹಿಂಬದಿ ಸವಾರಿಣಿ ದೀಕ್ಷಾ(25) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ. ಮಂಗಳವಾರ ರಾತ್ರಿ 12ರ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಈ ಘಟನೆ ನಡೆದಿದೆ.ಮೃತ ಸವಾರ ಅಭಿನಂದನ್ ಮತ್ತು ಹಿಂಬದಿ ಸವಾರಿಣಿ ದೀಕ್ಷಾ ಸ್ನೇಹಿತರು ಅಭಿನಂದನ್ ಆನ್‌ಲೈನ್ ವ್ಯವಹಾರದಲ್ಲಿ ತೊಡಗಿದ್ದರೆ, ದೀಕ್ಷಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ನೀವು ಪ್ರತಿದಿನ ‘ಸ್ನಾನ’ ಮಾಡ್ತೀರಾ.? ಇಂತಹ ಟೈಮಲ್ಲಿ ಮಾಡದಿರೋದೇ ಒಳ್ಳೆಯದು.! ಯಾಕಂದ್ರೆ.?
ಈ ಇಬ್ಬರು ಸ್ನೇಹಿತರು ದ್ವಿಚಕ್ರ ವಾಹನದಲ್ಲಿ ಮಂಗಳವಾರ ರಾತ್ರಿ ಕೋನಪ್ಪ ಅಗ್ರಹಾರ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಮೇಲ್ವೇತುವೆಯಲ್ಲಿ ತಮಿಳುನಾಡು ಕಡೆಗೆ ಹೋಗುತ್ತಿದ್ದರು.ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಅಭಿನಂದನ್ ಮತ್ತು ದೀಕ್ಷಾ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಇಬ್ಬರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
BREAKING: ‘ಗ್ಯಾರಂಟಿ ಯೋಜನೆ’ಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ‘ಹೆಚ್.ಎಂ ರೇವಣ್ಣ’, ಉಪಾಧ್ಯಕ್ಷರಾಗಿ ನಾಲ್ವರ ನೇಮಕ
ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಇಬ್ಬರೂ ಮೃತಪಟ್ಟಿದ್ದಾರೆ.ಅಪಘಾತದ ಬಳಿಕ ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಎಸೆಗಿದ ಕಾರು ಹಾಗೂ ಚಾಲಕನ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.