ಬೆಂಗಳೂರು: ನಗರದಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ( Revision of electoral rolls illegal ) ನಂತ್ರ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯನ್ನು ಶೇ. 100 ರಷ್ಟು ಪರಿಶೀಲನೆ ಮಾಡಲು ವಿಶೇಷ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ.

BIG NEWS: ನಾವು ಮತ್ತೆ ಅಧಿಕಾರಕ್ಕೆ ಬಂದರೇ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ – ಸಿದ್ಧರಾಮಯ್ಯ ಘೋಷಣೆ

ಈ ಕುರಿತಂತೆ ಬಿಬಿಎಂಪಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನಗರದ ಶಿವಾಜಿನಗರ, ಚಿಕ್ಕಪೇಟೆ, ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯನ್ನು ಶೇ. 100 ರಷ್ಟು ಪರಿಶೀಲನೆ ಮಾಡಲು ವಿಶೇಷ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ ಎಂದಿದೆ.

BIG NEWS: 2022 ಕಾಮನ್ವೆಲ್ತ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಪ್ರತಿಕ್ಷಾ ಜಿ ನಾಯಕ್ ಗೆ ಚಿನ್ನದ ಪದಕ

162-ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಭಾ.ಆ.ಸೇ., 169- ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಡಾ. ಆರ್. ವಿಶಾಲ್, ಭಾ.ಆ.ಸೇ. ಹಾಗೂ 174-ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಅಜಯ್ ನಾಗಭೂಷಣ್ ಭಾ.ಆ.ಸೇ., ರವರನ್ನು ಮತದಾರರ ಪಟ್ಟಿಯನ್ನು ಶೇ. 100 ರಷ್ಟು ಪರಿಶೀಲನೆ ಮಾಡಲು ವಿಶೇಷ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿರುತ್ತದೆ ಎಂದು ತಿಳಿಸಿದೆ.

‘ಕೋವಿಡ್ ಲಸಿಕೆ’ಗೆ ಸಂಬಂಧಿಸಿದ ಸಾವಿಗೆ ನಾವು ಜವಾಬ್ದಾರರಲ್ಲ: ‘ಸುಪ್ರೀಂ ಕೋರ್ಟ್’ಗೆ ಕೇಂದ್ರ ಸ್ಪಷ್ಟನೆ

ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಅನಧಿಕೃತವಾಗಿ ಮತದಾರರ ಮಾಹಿತಿಯನ್ನು ಸಂಗ್ರಹಿಸಿರುವುದಾಗಿ ದೂರು ದಾಖಲಾಗಿರುವ ಹಿನ್ನಲೆಯಲ್ಲಿ ಮಾನ್ಯ ಭಾರತ ಚುನಾವಣಾ ಆಯೋಗ ಪತ್ರ ಸಂಖ್ಯೆ: 23/ಏಖಿ/2022; ದಿನಾಂಕ: 25.11.2022. ಪತ್ರದಲ್ಲಿ ಕೆಲ ನಿರ್ದೇಶನ ನಿಡಲಾಗಿರುತ್ತದೆ ಎಂದಿದೆ.

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದಿಂದ ಹೊಸ ರೈಲು ಮಾರ್ಗಕ್ಕೆ ಹಣ ಮಂಜೂರು

ಪತ್ರದಲ್ಲಿ ನೀಡಿರುವ ನಿರ್ದೇಶನಗಳು:

  • ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ದಿನಾಂಕ: 01.01.2022 ಮತದಾರರ ಪಟ್ಟಿಗೆ ಸೇರ್ಪಡೆ ಮತ್ತು ತೆಗೆದುಹಾಕಿರುವ ಎಲ್ಲಾ ವಿವರಗಳನ್ನು ಶೇ. 100 ರಷ್ಟು ಪರಿಶೀಲಿಸುವುದು.
  • ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯನ್ನು ದಿನಾಂಕ: 09.12.2022 ರಿಂದ 24.12.2022 ರವರೆಗೆ 15 ದಿನ ಹೆಚ್ಚಿನ ಕಾಲಾವಕಾಶವನ್ನು ವಿಸ್ತರಿಸಲಾಗಿರುತ್ತದೆ.
  • ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸೇರ್ಪಡೆ ಮತ್ತು ತೆಗೆದುಹಾಕಿರುವ ವಿವರಗಳನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಒದಗಿಸಲು ನಿರ್ದೇಶನವನ್ನು ನೀಡಲಾಗಿರುತ್ತದೆ.
Share.
Exit mobile version