ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹೆಂಡತಿಯೇ ಗಂಡನಿಗೆ ಚಾಕು ಇರಿದು ಕೊಲೆ ಮಾಡಿದ್ದಾಳೆ, ಘಟನೆ ಸಂಭಂದ ಹೆಂಡತಿಯ ತಂದೆ, ತಾಯಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಲ್ಲತ್ತಹಳ್ಳಿಯಲ್ಲಿ ಈ ಕೊಲೆ ನಡೆದಿದ್ದು, ತೌಹಿಬ್ ಪಾಷ ಕೊಲೆಯಾದ ಪತಿ. ಪತ್ನಿ ಸೋಹಾನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಗಲಾಟೆ ನಡೆದು ಕೊಲೆ ಮಾಡಿದ್ದಾರೆ.
ಪತ್ನಿ, ಆಕೆಯ ತಾಯಿ, ಮತ್ತು ತಂದೆ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಪಾಷ ಕುಟುಂಬಸ್ಥರು ಆರೋಪಿಸಿದ್ದಾರೆ. ಸದ್ಯ ಹೆಂಡತಿ, ಅತ್ತೆ, ಮಾವನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








