ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ, ಅಪರಿಚಿತ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಮದ ಸುಬ್ರಮಣ್ಯ ನಗರದ ನಿವಾಸದಲ್ಲಿ ರಾಧಾ (33) ಎನ್ನುವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎಂಟು ವರ್ಷದ ಹಿಂದೆ ರಾಮಾಂಜಿನಯ್ಯರನ್ನು ಮದುವೆಯಾಗಿದ್ದರು. ಆದರೆ ಪತಿಗೆ ಬೇರೊಂದು ಮಹಿಳೆಯ ಜೊತೆ ಅನೈತಿಕ ಸಂಬಂಧ ಇತ್ತುಎಂದು ಹೇಳಲಾಗುತ್ತಿದೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ:ತನಿಖೆಗಾಗಿ ಮೂರು ವಿಶೇಷ ತಂಡಗಳ ರಚನೆ
ಈ ವಿಷಯವಾಗಿ ಸಾಕಷ್ಟು ಬಾರಿ ಹೇಳಿದರೂ ಅನೈತಿಕ ಸಂಬಂಧವನ್ನು ಪತಿ ಬಿಟ್ಟಿರಲಿಲ್ಲ ಹೀಗಾಗಿ ಇದರಿಂದ ನೊಂದು ರಾಧಾ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯಸಭೆ ಚುನಾವಣೆ ಗೆಲುವು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ:ಸ್ಪಷ್ಟನೆ ನೀಡಿದ ಸಯ್ಯದ್ ನಾಸೀರ್ ಹುಸೇನ್