ಬೆಂಗಳೂರು: ನಗರದಲ್ಲಿ ಚಾಕುವಿನಿಂದ ಕುತ್ತಿಗೆ ಕೊಯ್ದು ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ನಡೆದಿದೆ. ಅಕ್ರಮ ಸಂಬಂಧದ ಕಾರಣದಿಂದಾಗಿ ಪತಿ ಪತ್ನಿಯನ್ನು ಹತ್ಯೆ ಮಾಡಿರೋದಾಗಿ ಹೇಳಲಾಗುತ್ತಿದೆ.
ಬೆಂಗಳೂರಿನ ದೊಡ್ಡ ತೋಗೂರು ಬಳಿಯ ಪ್ರಗತಿ ನಗರದಲ್ಲಿ ಇಂದು ಬೆಚ್ಚಿ ಬೀಳಿಸು ಘಟನೆ ನಡೆದಿದೆ. ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆಯನ್ನು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.
ದೊಡ್ಡ ತೋಗೂರು ಬಳಿಯ ಪ್ರಗತಿ ನಗರದ ಶಾರದಾ(35) ಎಂಬುವರನ್ನು ಪತಿ ಕೃಷ್ಣ ಚಾಕುವಿನಿಂದ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ತೋಗೂರು ಬಳಿಯ ಪ್ರಗತಿ ನಗರದಲ್ಲಿನ ಈ ಹತ್ಯೆ ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.
ನಡು ರಸ್ತೆಯಲ್ಲೇ ಪತ್ನಿ ಶಾರದ(35) ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು, ಪತಿ ಕೃಷ್ಣ ಸ್ಥಳದಿಂದ ಪರಾರಿಯಾಗಿದ್ದಾನೆ. ಅಕ್ರಮ ಸಂಬಂಧದ ಹಿನ್ನಲೆಯಲ್ಲಿ ಶಾರದಾ ಕೊಲೆ ಮಾಡಿರುವಂತ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING: ಪ್ರೀತಿಸಲು ನಿರಾಕರಿಸಿದ ಮಹಿಳೆಯ ಮೇಲೆ ಖಾರದಪುಡಿ ಎರಚಿ ಪಾಗಲ್ ಪ್ರೇಮಿ ಹಲ್ಲೆ