ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸುವಂತ ಮತ್ತೊಂದು ಭೀಕರ ಮರ್ಡರ್ ನಡೆದಿದೆ. ಪತ್ನಿಯ ಶೀಲ ಶಂಕಿಸಿ ಪತಿಯೊಬ್ಬ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಬೆಂಗಳೂರಿನ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಇಂದು ಪತ್ನಿಯ ಶೀಲ ಶಂಕಿಸಿದಂತ ಪತಿಯೊಬ್ಬ ಕುರ್ಚಿಗೆ ಕಟ್ಟಿಹಾಕಿ, ಕತ್ತು ಕೊಯ್ದು ಮರ್ಡರ್ ಮಾಡಿದ್ದಾನೆ.
ನವ್ಯ(24) ಎಂಬಾಕೆಯನ್ನು ಕತ್ತು ಕೊಯ್ದು ಬರ್ಬರವಾಗಿ ಮನೆಯಲ್ಲಿ ಹತ್ಯೆ ಮಾಡಿದಂತ ಪತಿ ಕಿರಣ್ ಪರಾರಿಯಾಗಿದ್ದಾನೆ.
ಮೂರು ವರ್ಷಗಳ ಹಿಂದೆ ಕಿರಣ್ ಹಾಗೂ ನವ್ಯ ಮದುವೆಯಾಗಿದ್ದರು. ಕಿರಣ್ ಕೋರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರೇ, ನವ್ಯ ಖಾಸಗಿ ಶಾಲೆಯೊಂದರಲ್ಲಿ ನೃತ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ಪತ್ನಿಯ ಮರ್ಡರ್ ಸುದ್ದಿ ತಿಳಿದಂತ ಕೆಂಗೇರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬಿಜೆಪಿ ಕೇಂದ್ರ ಸರ್ಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿವರ್ತನೆ ಪರ್ವ ಆರಂಭ…!