ಬೆಂಗಳೂರು : ಟಿಕೆಟ್ ವಿಚಾರಕ್ಕೆ ನಡೆದ ಜಗಳದಲ್ಲಿ ಬಿಎಂಟಿಸಿ ಕಂಡಕ್ಟರ್ ಮಹಿಳೆ ಮೇಲೆ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ ಕಂಡಕ್ಟರ್ ಹೊನ್ನಪ್ಪ ವಿರುದ್ಧ ಐಪಿಸಿ ಸೆಕ್ಷನ್ 354, 323, 506 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದೀಗ ಕಂಡಕ್ಟರ್ ಹೊನ್ನಪ್ಪ ನಾಗಪ್ಪ ಅಗಸರನ್ನ ಅಮಾನತ್ತು ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ.
ನಗರದ ಸಿದ್ದಾಪುರ ಠಾಣಾ ವ್ಯಾಪ್ತಿಯ ಡೈರಿ ಸರ್ಕಲ್ ಬಳಿ ನಡೆದಿದೆ. ತನ್ಜುಲಾ (24) ಹಲ್ಲೆಗೊಳಗಾದ ಯುವತಿ. ಹೊನ್ನಪ್ಪ ಹಲ್ಲೆ ಮಾಡಿರುವ ಆರೋಪಿ. ಯುವತಿಯ ಮೇಲೆ ಹಲ್ಲೆ ಮಾಡಿರುವ ಆರೋಪಿ ಕಂಡಕ್ಟರ್ ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 354, 323, 506 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಕಂಡಕ್ಟರ್ ಹೇಳಿದ್ದೇನು?
ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಹೊನ್ನಪ್ಪನನ್ನ ಈಗಾಗಲೇ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾಗಿದ್ದ ತನ್ಜಿಲಾ ಇಸ್ಮಾಯಿಲ್ ಎಂಬ ಮಹಿಳೆ ಪ್ರಯಾಣದ ಟಿಕೆಟ್ ಕೇಳಿದ್ದಾಳೆ. ಈ ವೇಳೆ ಕಂಡಕ್ಟರ್, ಕೊಡ್ತಿನಿ ಇರಿ ಎಂದಿದ್ದಾನೆ. ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ರೊಚ್ಚಿಗೆದ್ದ ಕಂಡಕ್ಟರ್ ಹಲ್ಲೆ ನಡೆಸಿದ್ದಾನೆ ಎನ್ನಲಾಗಿತ್ತು.
ಬಿಳೆಕಳ್ಳಿ ಬಳಿ ಬಸ್ ಹತ್ತಿದ್ದ ಮಹಿಳೆಗೆ ಟಿಕೆಟ್ ನೀಡಲು ಆಧಾರ್ ಕಾರ್ಡ್ ತೋರಿಸುವಂತೆ ಕಂಡಕ್ಟರ್ ಹೇಳಿದ್ದಾರೆ. ಆದರೆ, ಎರಡು ಸ್ಟಾಪ್ ಬಂದರೂ ಯುವತಿ ತನ್ನ ಆಧಾರ್ ಕಾರ್ಡ್ ತೋರಿಸಿಲ್ಲ.ಬಳಿಕ ನಿಮ್ಮ ಸ್ಟೇಜ್ ಮುಕ್ತಾಯವಾಗುತ್ತೆ ಬೇಗ ಆಧಾರ್ ಕಾರ್ಡ್ ತೋರಿಸಿ, ಇಲ್ಲದಿದ್ದರೆ ಹಣ ಕೊಟ್ಟು ಟಿಕೆಟ್ ತೆಗೆದುಕೊಳ್ಳುವಂತೆ ಎಂದು ಕಂಡಕ್ಟರ್ ಸೂಚಿಸಿದ್ದಾರೆ. ಇದರಿಂದ ಕೆಂಡಾಮಂಡಲಳಾದ ಮಹಿಳೆ, ಮಾತಿಗೆ ಮಾತು ಬೆಳೆದು ಕಂಡಕ್ಟರ್ಗೆ ಕಪಾಳ ಮೋಕ್ಷ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಂಡಕ್ಟರ್ ಕೂಡ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ