ಬೆಂಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತಂತ ಪತ್ನಿಯೊಬ್ಬಳು ತನ್ನ ಐದು ವರ್ಷದ ಮಗಳನ್ನು ಕೊಲೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಂಗಳೂರಲ್ಲಿ ನಡೆದಿದೆ.
ಬೆಂಗಳೂರಿನ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದ್ದು, ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಶೃತಿ (33) ತನ್ನ 5 ವರ್ಷದ ರೋಶಿಣಿಯನ್ನು ಫ್ಯಾನಿಗೆ ನೇಣು ಹಾಕಿ, ತಾನು ಅದೇ ಫ್ಯಾನಿಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಂದಹಾಗೇ ಪಾವಗಡದ ಗುಂಡಾರಹಳ್ಳಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷೆಯಾಗಿರುವಂತ ಶೃತಿ ಮತ್ತು ಮಗಳು ಬೆಂಗಳೂರಿನ ಬಾಗಲಗುಂಟೆಯಲ್ಲಿ ವಾಸವಿದ್ದರು. ಗಂಡ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತು, ಇಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಯಾಣಿಕರಿಗೆ ಬಿಗ್ ಶಾಕ್: ಹುಬ್ಬಳ್ಳಿ-ರಾಮೇಶ್ವರಂ-ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದು
ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ – ವರದಿ