ಬೆಂಗಳೂರು : ಇತ್ತೀಚಿಗೆ ಯುವ ಸಮೂಹವು ಎಷ್ಟು ಸೂಕ್ಷ್ಮವಾಗಿದೆ ಎಂದರೆ ಒಂದು ಮಾತು ಹೆಚ್ಚು ಬೈದರು ಏನಾದರು ಒಂದು ಅನಾಹುತ ಮಾಡಿಕೊಳ್ಳುವಷ್ಟು ಬದಲಾಗಿ ಬಿಟ್ಟಿದ್ದಾರೆ.ಇದಕ್ಕೆಲ್ಲ ಮೂಲ ಕಾರಣ ಮೊಬೈಲ್. ಇದೀಗ ಇಂತಹದ್ದೇ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಪೋಷಕರು ಜಾಸ್ತಿ ಮೊಬೈಲ್ ಬಳಸದಂತೆ ಮಗಳಿಗೆ ಬುದ್ಧಿವಾದ ಹೇಳಿದ್ದಕ್ಕೆ ಇದರಿಂದ ಮನನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಒಂದು ಘಟನೆ ನಡೆದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಿಖಿತಾ(18) ನೇಣಿಗೆ ಶರಣಾದ ವಿದ್ಯಾರ್ಥಿ ಎಂದು ತಿಳಿದುಬಂದಿದೆ.ಸುಧಾ ಮತ್ತು ನಾರಾಯಣ ದಂಪತಿಯ ಪುತ್ರಿಯಾದ ಮೃತ ಲಿಖಿತಾ, ಪ್ಯಾರಾಮೆಡಿಕಲ್‌ ವ್ಯಾಸಂಗ ಮಾಡುತ್ತಿದ್ದರು.

ಓದಿನಲ್ಲಿಯೂ ಮುಂದೆ ಇದ್ದ ಲಿಖಿತಾ, ಇತ್ತೀಚಿಗೆ ಫೋನಿನ ಗೀಳು ಹತ್ತಿಸಿಕೊಂಡಿದ್ದಳಂತೆ. ಯಾವಾಗಲೂ ಫೋನಿನಲ್ಲಿ ಮಾತನಾಡಿತ್ತಿದ್ದ ಆಕೆ, ಚಾಟಿಂಗ್, ಸ್ನ್ಯಾಪ್, ಇನ್ಸ್ಟಾ, ಫೇಸ್‌ಬುಕ್ ಎಂದು ಫೋನ್‌‌ನಲ್ಲಿ ಬ್ಯುಸಿ ಇರುತ್ತಿದ್ದಳು. ಇದನ್ನ ಗಮನಿಸಿದ್ದ ಲಿಖಿತಾ ತಂದೆ ನಾರಯಣ್ ಬೆಳಿಗ್ಗೆ ಬೈದು ಬುದ್ದಿ ಹೇಳಿದ್ದಾರೆ.ಈ ಹಿನ್ನಲೆ ಯುವತಿ ರೂಂ ಸೇರಿದ್ದರು. ಬಳಿಕ ಎರಡು ಗಂಟೆ ನಂತರ ರೂಂ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ರೂಮಿನಲ್ಲಿ ಫ್ಯಾನಿಗೆ ಸೀರೆ ಬಳಸಿಕೊಂಡು ನಿಖಿತಾ ನೀನು ಬೈದುಕೊಂಡಿರುವ ದೃಶ್ಯ ಕಂಡು ಪೋಷಕರು ಆಘಾತಕೆ ಒಳಗಾಗಿದ್ದಾರೆ. ಘಟನೆ ಕುರಿತಂತೆ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಡೆಗೆ ಸಂಬಂಧಿಸಿದ ಈಗ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Share.
Exit mobile version