ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣ ಹಾಗೂ ಚಿಕ್ಕ ಚಿಕ್ಕ ಕೌಟುಂಬಿಕ ಕಲಹಗಳಿಗೆ ಜನರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.ಇದೀಗ ಬೆಂಗಳೂರಿನಲ್ಲಿ ಇಂತಹ ಘಟನೆ ನಡೆದಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತ ಪತ್ನಿ ಪತಿಯ ಕಿರುಕುಳಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸಂಧ್ಯಾ ಎಂದು ಹೇಳಲಾಗುತ್ತಿದ್ದು, ಆಕೆಯ ಪತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಆಕೆಯ ಪತಿ ನೀಡುತ್ತಿದ್ದ ಕಿರುಕುಳವೇ ಆಕೆಯ ಸಾವಿಗೆ ಕಾರಣ ಎಂದು ಮಹಿಳೆಯ ತಂದೆ ಇದೀಗ ಆರೋಪಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಿನ್ನೆ ಘಟನೆ ನಡೆದಿದೆ.
ಸಾವಿಗೆ ಶರಣಾದ ಮಹಿಳೆಯನ್ನು ಸಂಧ್ಯಾ ಎಂದು ಗುರುತಿಸಲಾಗಿದೆ. ಅಳಿಯ ಜಯಪ್ರಕಾಶ್ ಮಗಳಿಗೆ ದಿನವೂ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆರೋಪಿಸಿದ್ದು, ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಧ್ಯಾ ಹಾಗೂ ಜಯಪ್ರಕಾಶ್ ಮದುವೆಯಾಗಿ 5 ವರ್ಷ ಆಗಿದ್ದು, 4 ವರ್ಷದ ಒಂದು ಗಂಡು ಮಗುವಿತ್ತು. ಎಲ್ಲಾ ಕಡೆ ಸಾಲ ಮಾಡಿದ್ದ ಗಂಡ ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಇದರಿಂದ ಮನನೊಂದ ಸಂಧ್ಯಾ ಸೀದಾ ಹೋಗಿ ನೇಣಿಗೆ ಶರಣಾಗಿದ್ದಾಳೆ. ಇದೀಗ ಬಸವೇಶ್ವರ ಠಾಣೆ ಪೋಲೀಸರು ಘಟನೆ ಕುರಿತಂತೆ ತನಿಖೆಗೆ ಹೋಗಿದ್ದಾರೆ.