ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಘೋರ ದುರಂತ ಒಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮಹಿಳೆ ಒಬ್ಬರು ಸಾವನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಈ ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬುದಾಗಿ ಬಾಮೈದ ಶಿವರಾಮ್ ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹೌದು ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯ ಬಳಿ ನಿಂತಿದ್ದಾಗ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ.
ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ (50) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮಂಜಮ್ಮ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತಂತೆ ಬೆಂಗಳೂರಿನ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ವ್ಯಾಪ್ತಿಯಲ್ಲಿ ನಡೆದಿತ್ತು.
ಬೆಸ್ಕಾಂ ನಿರ್ಲಕ್ಷ್ಯದಿಂದ ಮಂಜಮ್ಮ ಸಾವನ್ನಪ್ಪಿದ್ದಾರೆ ಎಂಬುದಾಗಿ ಭಾಮೈದ ನೀಡಿದಂತ ದೂರು ಆಧರಿಸಿ ತಾವರೆಕೆರೆ ಠಾಣೆಯ ಪೊಲೀಸರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
BREAKING: ಗ್ರಾಮ ಪಂಚಾಯ್ತಿಗಳಲ್ಲಿ ‘ಗ್ರಾಮಸಭೆ’ ನಡೆಸಲು ಮಾರ್ಗಸೂಚಿ ಬಿಡುಗಡೆ: ಈ ನಿಯಮಗಳ ಪಾಲನೆ ಕಡ್ಡಾಯ
ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು