ಬೆಂಗಳೂರು: ನಗರದಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಂತ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ತನಿಖೆಗೆ ಇಳಿದಂತ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಮನೆಗೆ ನುಗ್ಗಿದ್ದಂತ ಆರೋಪಿಗಳು, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವನ್ನು ಮೂವರು ಎಸಗಿದ್ದರು. ಬೆಂಗಳೂರಿನ ಉತ್ತರ ತಾಲ್ಲೂಕಿನ ಗಂಗೊಂಡನಹಳ್ಳಿಯಲ್ಲಿ ಈ ಕೃತ್ಯ ನಡೆದಿತ್ತು.
BIG NEWS: ಸಿಎಂ ಹುದ್ದೆಗಾಗಿ ಡಿ.ಕೆ ಶಿವಕುಮಾರ್ ಸಂಕಲ್ಪ: ರಾಯಚೂರಿನ ಪಂಚಮುಖಿ ಆಂಜನೇಯ ದೇಗುಲದ ಅರ್ಚಕ