ಬೆಂಗಳೂರು : ಬೆಂಗಳೂರಿನಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ HAL ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾರತಹಳ್ಳಿಯ ಸಮೀಪ ಬೋರ್ವೆಲ್ ಜಂಕ್ಷನ್ ಬಳಿ ನಡೆದಿದೆ.ಮೃತ ಮಹಿಳೆಯನ್ನ ರತ್ನಮ್ಮ (47) ಎಂದು ಗುರುತಿಸಲಾಗಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ರತ್ನಮ್ಮ ಚಿಕಿತ್ಸೆ ಫಲಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ರತ್ನಮ್ಮ ಸಾವನ್ನಪ್ಪಿದ್ದಾರೆ. ತಕ್ಷಣ HAL ಸಂಚಾರಿ ಠಾಣೆಯ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.