ಬೆಂಗಳೂರು : ಬೆಂಗಳೂರಿನಲ್ಲಿ ಎರಡು ಬೈಕ್ ಗಳ ನಡುವೆ ಭೀ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳು ಪರಸ್ಪರ ಡಿಕ್ಕಿಯಾಗಿ ಓರ್ವ ಯುವತಿ ಯುವಕನಿಗೆ ಗಾಯಗಳಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ವಿನಯ್ (23) ಸ್ಥಿತಿ ಗಂಭೀರವಾಗಿದ್ದು, ಇನ್ನೂ ಸಿರಿ (22) ಎಂಬ ಯುವತಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಡಿಯೋ ಸ್ಕೂಟಿ ಅಲ್ಲಿ ಯುವತಿ ಸಿರಿ ಶ್ರೀ ಮಹಾಲಕ್ಷ್ಮಿ ಲೇಔಟ್ ಕಡೆಗೆ ತೆರಳುತ್ತಿದ್ದಳು. ಅದೇ ಮಾರ್ಗವಾಗಿ ವೇಗವಾಗಿ ಬರುತ್ತಿದ್ದ ಯುವಕ ವಿನಯ್ ಪರಸ್ಪರ ಎರಡು ಬೈಕ್ ಗಳು ಡಿಕ್ಕಿಯಾಗಿವೆ. ಹೆಲ್ಮೆಟ್ ಧರಿಸಿದ ಕಾರಣ ವಿನಯ್ ತಲೆಗೆ ತೀವ್ರ ಪೆಟ್ಟಾಗಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಕುರಿತು ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ