ಬೆಂಗಳೂರು : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ಹಾಗೂ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನ ಜಾಲಹಳ್ಳಿಯ ಮೆಟ್ರೋ ನಿಲ್ದಾಣದಲ್ಲಿ 49 ವರ್ಷದ ವ್ಯಕ್ತಿಯೊಬ್ಬರು ಮೆಟ್ರೋ ಟ್ರೈನ್ ಬರುತ್ತಿದ್ದಂತೆ ಎರಡು ಹಳಿಗಳ ಮಧ್ಯ ಮಲಗಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಹೌದು ಬೆಂಗಳೂರಿನ ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಾಲಹಳ್ಳಿ ಮೆಟ್ರೋ ರೈಲು ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ. ಮೆಟ್ರೋ ರೈಲು ಬರುತಿದ್ದಂತೆ ವ್ಯಕ್ತಿ ಎರಡು ಹಳಿಗಳ ಮಧ್ಯ ಮಲಗಿದ್ದಾನೆ. ಜಾಲಹಳ್ಳಿಯ ಹಸಿರು ಮಾರ್ಗದಲ್ಲಿ ಮೆಟ್ರೋ ಟ್ರೈನ್ ಬರುವಾಗ ಈ ಒಂದು ಘಟನೆ ನಡೆದಿದೆ. ಕೂಡಲೇ ಮೆಟ್ರೋ ಸಿಬ್ಬಂದಿಗಳು ವ್ಯಕ್ತಿಯನ್ನು ರಕ್ಷಣೆ ಮಾಡಿ ವಶಕ್ಕೆ ಪಡೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆ ವೇಳೆ ಬಿಎಂಆರ್‌ಸಿಎಲ್ ಮೆಟ್ರೋ ಸಂಚಾರ ಸ್ಥಗಿತಗೊಳಿಸಿದೆ. ಈ ಹಿನ್ನಲೆಯಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಇಂದು ಬೆಳಿಗ್ಗೆ 10.26ಕ್ಕೆ ಈ ಒಂದು ಘಟನೆ ನಡೆದಿದೆ.ಅನಿಲ್ ಕುಮಾರ್ ಪಾಂಡೆ (49) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಉತ್ತರ ಪ್ರದೇಶದ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ ಜಾಲಹಳ್ಳಿಯಲ್ಲಿ ಸ್ವಂತ ಫ್ಲಾಟ್ ನಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ಯತಿಸಿದ ಅನಿಲ್ ಕುಮಾರ್ ರನ್ನು ಮೆಟ್ರೋ ಸಿಬ್ಬಂದಿ ರಕ್ಷಿಸಿದ್ದಾರೆ. ಕೆಲ ಕಾಲ ಸ್ಥಗಿತಗೊಂಡಿದ್ದ ಮೆಟ್ರೋ ಸಂಚಾರ ಎಂದಿನಂತೆ ಮತ್ತೆ ಆರಂಭವಾಗಿವೆ.








