ಬೆಂಗಳೂರು: ವಿದ್ಯುತ್ ಕೇಂದ್ರಗಳ ತುರ್ತು ನಿರ್ವಹಣಾ ಕಾರ್ಯದಿಂದಾಗಿ ನಾಳೆ ಬೆಂಗಳೂರಿನ ( Bengaluru ) ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ( BESCOM ) ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತಂತೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 21-10-2022ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಣ್ಣೂರು ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಹೀಗಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ.
ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ನಾಳೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹೆಣ್ಣೂರು ಬಂಡೆ, ಸಮುದ್ರಿಕಾ ಎನ್ ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜು, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್ ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ ಶಿಪ್, ನಗರ ಗಿರಿ ಟೌನ್ ಶಿಪ್, ಕೆ.ನಾರಾಯಣಪುರ ಕ್ರಾಸ್ ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇದಲ್ಲದೇ ಬಿಡಿಎಸ್, ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜಿನಪ್ಪ ಲೇಔಟ್, ಸಿಎಸ್ಐ ಗೇಟ್, ಭೈರತಿ ಕ್ರಾಸ್, ಭೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ, ಫಾರ್ಚೂನ್, ಮೈಕಲ್ ಸ್ಕೂಲ್, ಬಿಹೆಚ್ ಕೆ ಇಂಡಸ್ಟ್ರೀಸ್ ನಲ್ಲಿ ಪವರ್ ಕಟ್ ಆಗಲಿದೆ.
BREAKING NEWS: ದಿಢೀರ್ ಸಿಎಂ ಬೊಮ್ಮಾಯಿಯವರ ಇಂದಿನ ಧಾರವಾಡ ಮತ್ತು ನಾಳೆಯ ಹಾವೇರಿ ಜಿಲ್ಲಾ ಪ್ರವಾಸ ರದ್ದು
ಜಾನಕೀರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಕೆ ಆರ್ ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಂ ಎನ್ ಕ್ಲೈವ್, ಭೈರತಿ ಬಂಡೆ, ನಕ್ಷೆತ್ರ ಲೇಔಟ್, ತಿಮ್ಮಗೌಡ ಲೇಔಟ್, ಆಂಧ್ರ ಕಾಲೋನಿ ಮಂಜುನಾಥ ನಗರ, ಹೊರಮಾವು ಬಿಬಿಎಂಪಿ, ಅಗರಗ್ರಾಮ, ಪಟಾಲಮ್ಮ ಟೆಂಪಲ್, ಎಕೆಆರ್ ಸ್ಕೂಲ್ ಹೊಸ ಮಿಲೇನಿಯಂ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಸ್ಟೈನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.