Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಬಸನವಗುಡಿಯ ‘ಕಡಲೆಕಾಯಿ ಪರಿಷೆ’ಗೆ ಭರ್ಜರಿ ರೆಸ್ಪಾನ್ಸ್: 3 ದಿನಗಳಲ್ಲೇ 6 ಲಕ್ಷಕ್ಕೂ ಹೆಚ್ಚು ಜನರು ಭಾಗಿ
KARNATAKA

ಬೆಂಗಳೂರಿನ ಬಸನವಗುಡಿಯ ‘ಕಡಲೆಕಾಯಿ ಪರಿಷೆ’ಗೆ ಭರ್ಜರಿ ರೆಸ್ಪಾನ್ಸ್: 3 ದಿನಗಳಲ್ಲೇ 6 ಲಕ್ಷಕ್ಕೂ ಹೆಚ್ಚು ಜನರು ಭಾಗಿ

By kannadanewsnow0920/11/2025 4:53 PM

ಬೆಂಗಳೂರು: ನಗರದ ಬಸವನಗುಡಿಯ ಕಡಲೆಕಾಯಿ ಪರಿಷೆ’ ಈ ವರ್ಷ ಅಭೂತಪೂರ್ವ ಯಶಸ್ಸು ದಾಖಲಿಸಿದೆ. ಮೂರು ದಿನಗಳಲ್ಲಿಯೇ 6 ಲಕ್ಷ ಜನ ಭಾಗವಹಿಸಿದ್ದು, ಪರಿಷೆ ಮುಕ್ತಾಯವಾಗುವುದರೊಳಗೆ 12 ಲಕ್ಷಕ್ಕೂ ಮೀರಿ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಕಾರ್ತಿಕ ಮಾಸದ ಕೊನೆಯ ಸೋಮವಾರ ಆರಂಭವಾದ ಐತಿಹಾಸಿಕ ಬೆಂಗಳೂರು ಕಡಲೆಕಾಯಿ ಪರಿಷೆಯು ಈ ವರ್ಷ ಹಲವು ವಿಶೇಷತೆಗಳಿಗೆ ಕಾರಣವಾಗಿದೆ. ಬಸವನಗುಡಿಯ ಸುತ್ತಮುತ್ತಲಿನ ರಸ್ತೆಗಳು ಜನಜಾತ್ರೆಯಿಂದ ಸಂಭ್ರಮದಲ್ಲಿ ಮುಳುಗಿ ಹೋಗಿದೆ ಎಂದರೆ ತಪ್ಪಾಗಲಾರದು. ಮೂರು ದಿನಗಳಲ್ಲಿ ಅರು ಲಕ್ಷಕ್ಕೂ ಹೆಚ್ಚು ಜನ ಭೇಟಿ ನೀಡಿದ್ದಾರೆ ಎಂದು ಹೇಳಿದ್ದಾರೆ.

ಮುಜರಾಯಿ ಇಲಾಖೆಯು ಈ ವರ್ಷ ಅಧಿಕೃತವಾಗಿಯೇ ಐದು ದಿನಗಳ ಕಾಲಕ್ಕೆ ಪರಿಷೆಯನ್ನು ವಿಸ್ತರಿಸಿ ಅಚ್ಚುಕಟ್ಟಾಗಿ ಆಯೋಜಿಸಿದೆ. ಸೋಮವಾರ ಪರಿಷೆ ಆರಂಭವಾಗಿದ್ದರೂ, ಶನಿವಾರದಿಂದಲೇ ಜಾತ್ರೆ ಸಡಗರ ಆರಂಭವಾಗಿತ್ತು. ಶುಕ್ರವಾರಕ್ಕೆ ಮುಗಿದರೂ ವಾರಾಂತ್ಯವಿರುವುದರಿಂದ ಭಾನುವಾರದವರೆಗೂ ಜನಸಂದಣಿ‌ ಇರಲಿದೆ ಎಂದು ಪೊಲೀಸ್ ಇಲಾಖೆ ಅಂದಾಜಿಸಿದೆ ಎಂದು ತಿಳಿಸಿದ್ದಾರೆ.

ಕಡಲಕಾಯಿ ಪರಿಷೆಯಲ್ಲಿ ಇದೇ ಮೊದಲನೇ ಬಾರಿಗೆ ವಿಶೇಷ ದೀಪಾಲಂಕಾರ ಮತ್ತು ದೇವಸ್ಥಾನ ಮತ್ತು ಆವರಣದಲ್ಲಿ‌ ಹೂವಿನ ವಿಶೇಷ ಅಲಂಕಾರ ವ್ಯವಸ್ಥೆ ಮಾಡಲಾಗಿದೆ. ಬಸವ ಗುಡಿ, ಗಾಂಧಿ ಬಜಾರ್, ಆರ್ ವಿ ರಸ್ತೆ, ನೆಟ್ಟ್ಕಲ್ಲಪ್ಪ ಸರ್ಕಲ್, ಎನ್ ಆರ್ ರಸ್ತೆಯಲ್ಲಿ ವಿಶೇಷ ದೀಪಾಲಂಕಾರ ಹಾಗೂ ದೇವಸ್ಥಾನ ಮತ್ತು ಆವರಣದಲ್ಲಿ ವೈಶಿಷ್ಟ್ಯಪೂರ್ಣ ಹೂವಿನ ಅಲಂಕಾರ ಮಾಡಲಾಗಿದ್ದು, ಭಕ್ತರ‌ ಗಮನ ಸೆಳೆಯುತ್ತಿವೆ ಎಂದಿದ್ದಾರೆ.

ಬೆಂಗಳೂರಿನ‌ ಜನರಿಗೆ ಜಾತ್ರೆಯ ಸೊಬಗು ನೀಡಿದ ಕಡಲೆ ಕಾಯಿ ಪರಿಷೆ

ದೊಡ್ಡ ಬಸವಣ್ಣನೊಂದಿಗೆ ದೊಡ್ಡ ಗಣಪತಿ, ಕಾರಂಜಿ ಆಂಜನೇಯನ ದರ್ಶನ ಪಡೆದ ಜನರು, ನಂತರ ಕಡಲೆಕಾಯಿ ಖರೀದಿಸಿದರು. ದಿನಾಂಕ : 17-11-2025 ಸೋಮವಾರದಿಂದ ಅಧಿಕೃತವಾಗಿ‌ ಪರಿಷೆ‌ ಪ್ರಾರಂಭವಾಗಿದ್ದರೂ ಸಹ‌ ಶನಿವಾರದಿಂದಲೇ ವ್ಯಾಪಾಸ್ಥರು, ಜನರು ಜಮಾಯಿಸಿದ್ದರು. ಜನರು ಪರಿಷೆಗೆ ಬಂದು ಕಡಲೆಕಾಯಿ ಖರೀదిಸಿ, ಸಂಜೆಯ ವೇಳೆಯಲ್ಲಿ ಕಾಲಿಡಲೂ ಸಾಧ್ಯವಿಲ್ಲದಷ್ಟು ಜನರಾಶಿ ಬಸವನಗುಡಿ ಮುಖ್ಯ ರಸ್ತೆಯಲ್ಲಿ ಕಂಡುಬಂದಿತ್ತು.

ಪರಿಷೆಯಲ್ಲಿ ಈ ಬಾರಿ 4,500ಕ್ಕೂ ಮಳಿಗೆಗಳಿದ್ದು, ಪ್ರತಿದಿನವೂ ಬಿಬಿಎಂಪಿ ವತಿಯಿಂದ ಸ್ವಚ್ಛತೆ ಕಾರ್ಯ ನಡೆಯುತ್ತಿದೆ. ಬೆಂಗಳೂರು ನಗರದ ನಿವಾಸಿಗಳಲ್ಲದೆ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಜನರು ಹೆಚ್ಚಾಗಿ ಬರುತ್ತಿದ್ದಾರೆ.

ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ರವರು ಪ್ರತಿದಿನವೂ ಬಸವನಗುಡಿ ಪ್ರದೇಶಕ್ಕೆ ಭೇಟಿ ನೀಡಿ, ವ್ಯವಸ್ಥೆಗಳ ಮೇಲೆ ಖುದ್ದು ನಿಗಾವಹಿಸುತ್ತಿದ್ದಾರೆ. ಪರಿಷೆ ನಡೆಯುತ್ತಿರುವ ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಗೆ ಆದ್ಯತೆ ನೀಡಿದ್ದು, ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. 800ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ರಸ್ತೆಯ ಎರಡೂ ಬದಿಯ ಜೊತೆಗೆ ಮಧ್ಯಭಾಗದಲ್ಲೂ ಕಡಲೆಕಾಯಿಯನ್ನು ರಾಶಿ ರಾಶಿ ಹಾಕಿಕೊಂಡು ಮಾರಾಟ ಮಾಡಲಾಗುತ್ತಿದೆ. ಹಸಿ, ಒಣ ಬೇಯಿಸಿದ, ಹುರಿದ ಕಡಲೆಕಾಯಿ , ಹತ್ತು ಹಲವು ಬಗೆಯ ಕಡಲೆಕಾಯಿಯ ಆಕರ್ಷಣೆಯ ಜತೆಗೆ ಬೇಲ್, ಬಜ್ಜಿ, ಮಸಾಲ ಹಪ್ಪಳ, ಅಲೂ ಟ್ವಿಸ್ಟರ್ ಸೇರಿದಂತೆ ವಿವಿಧ ಭಕ್ಷ್ಯಗಳು, ಆಟಿಕೆ ಆಕರ್ಷಿಸುತ್ತಿವೆ. ಜಗಮಗಿಸುವ ಬೆಳಕಿನಲ್ಲಿ ಆಟದ ಮೋಜು ಕೂಡಾ ಇದೆ.

ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ ಕಡಲೆಕಾಯಿ ಖರೀದಿಸಿ ಕೊಂಡೊಯ್ಯಲು ಹಲವು ಮಂದಿ ಬಟ್ಟೆಯ ಚೀಲಗಳನ್ನು ತಂದಿದ್ದು, ಪರಿಸರ‌ ಸ್ನೇಹಿ ಪರಿಷೆಗೆ ಸಾಕ್ಷಿಯಾಗಿದೆ.

ಬಸವನಗುಡಿಯ ಪರಿಷೆಯಲ್ಲಿ ಕಡಲೆಕಾಯಿ ಮಾರಾಟದ ವಹಿವಾಟು ಒಂದು ಕೋಟಿಗೂ ಹೆಚ್ಚಾಗಿದೆ ಎನ್ನಲಾಗಿದೆ. ಕಳೆದ ವರ್ಷಕ್ಕಿಂತ ದುಪ್ಪಟ್ಟು ಪ್ರಮಾಣದಲ್ಲಿ ಮಳಿಗೆಗಳಿದ್ದು, ವ್ಯಾಪಾರವೂ ಚೆನ್ನಾಗಿ ಆಗಿದೆ. ಮಳಿಗೆಗೆ ಶುಲ್ಕ ವಿನಾಯಿತಿ ನೀಡಿರುವುದರಿಂದ ವ್ಯಾಪಾರಿಗಳು ಸಂತಸದಿಂದ , ಕಳೆದ ಶುಕ್ರವಾರದಿಂದಲೇ ಸಾಕಷ್ಟು ಮಂದಿ ಮಳಿಗೆ ಪ್ರಾರಂಭಿಸಿ ವ್ಯಾಪಾರ ಮಾಡುತ್ತಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶದಿಂದ ಕಡಲೆಕಾಯಿ ತಂದು ಇಲ್ಲಿ ಮಾರಾಟ ಮಾಡುತ್ತಿದ್ದಾರೆ. *ಒಟ್ಟಾರೆ ಈ ವರುಷ ಜರುಗುತ್ತಿರುವ ಕಡಲೆ‌ಕಾಯಿ ಪರಿಷೆಯು ಹಲವು ವೈಶಿಷ್ಟ್ಯಗಳಿಂದ ಜನಮನ ಸೆಳೆಯುತ್ತಿದೆ.

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ

ALERT : ಈ `ಪಾಸ್ ವರ್ಡ್’ಗಳನ್ನು ಬಳಸಿದ್ರೆ ನಿಮ್ಮ `ಡೇಟಾ ಲೀಕ್’ ಆಗಬಹುದು ಎಚ್ಚರ.!

Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM1 Min Read

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM2 Mins Read

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM2 Mins Read
Recent News

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM

ಸುರಕ್ಷಿತ ಲೈಂಗಿಕತೆ: ಆರೋಗ್ಯಕರ ಜೀವನಕ್ಕೆ ಒಂದು ಮಾರ್ಗದರ್ಶಿ, ಇಲ್ಲಿದೆ ಟಿಪ್ಸ್

15/03/2026 9:43 PM
State News
KARNATAKA

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

By kannadanewsnow0915/03/2026 10:37 PM KARNATAKA 1 Min Read

​ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿವಂಗತ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್‌ ಅವರೊಂದಿಗಿನ ತಮ್ಮ ಒಡನಾಟ ಮತ್ತು ಲಂಕೇಶ್‌ ಪತ್ರಿಕೆಯಲ್ಲಿ…

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.