ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ, ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿದೆ.
ಈ ಸಂಬಂಧ ನಡವಳಿಯನ್ನು ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಇವರ ಕಡತದಲ್ಲಿನ ಪ್ರಸ್ತಾವನೆಯಲ್ಲಿ ಬೆಂಗಳೂರು ನಗರ ಜಿಲ್ಲೆ, ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಂಡಿ ಸರ್ಕಾವಣೆ ಸಂದರ್ಭದಲ್ಲಿ ಸಿ.ಸಿ.ಟಿ.ವಿ.ಯಲ್ಲಿ ಸೆರೆಯಾಗಿರುವ ದೇವಾಲಯದ ಸಿಬ್ಬಂದಿಗಳಿಂದಲೇ ಕಳ್ಳತನವಾಗಿರುವ ದೃಶ್ಯದ ತುಣುಕಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು, ಸದರಿ ದೇವಾಲಯದಲ್ಲಿ ಆಡಳಿತ ನಿರ್ವಹಣೆಯನ್ನು ಅವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸಲಾಗುತ್ತಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿರುವ ಕಾರಣ ಸದರಿ ದೇವಾಲಯವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್ 42 ಮತ್ತು 43ರ ಅನ್ವಯ ಸರ್ಕಾರದ ವಶಕ್ಕೆ ಪಡೆಯುವ ಸಂಬಂಧ ಸ್ಪಷ್ಟ ಅಭಿಪ್ರಾಯದ ವರದಿಯನ್ನು ಸಲ್ಲಿಸುವಂತೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಇವರು ದಿನಾಂಕ:01.10.2024ರಂದು ಜಿಲ್ಲಾಧಿಕಾರಿಯವರನ್ನು ಕೋರಲಾಗಿರುತ್ತದೆ ಎಂದಿದೆ.
ಅದರಂತೆ, ಅಪರ ಜಿಲ್ಲಾಧಿಕಾರಿಗಳು ಮತ್ತು ಉಪ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಬೆಂಗಳೂರು ed as Road BUDC-DVSOTEMP/393/2024-DVS-BUR-DC OFFICE, ದಿನಾಂಕ:25.04.2025ರಲ್ಲಿ ಪ್ರಸ್ತಾಪಿತ ದೇವಾಲಯವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್ 42 ಮತ್ತು 43ರ ಘೋಷಿತ ಸಂಸ್ಥೆಯನ್ನಾಗಿ ಘೋಷಿಸಿ ಸರ್ಕಾರದ ವಶಕ್ಕೆ ಪಡೆಯುವ ವಿಚಾರದ ಬಗ್ಗೆ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ, ಕಾಯ್ದೆಯ ಕಲಂ 43(6)ರಡಿಯಲ್ಲಿ ವಿಚಾರಣೆಯನ್ನು ನಡೆಸಿ ವಿಚಾರಣಾ ವರದಿಯನ್ನು ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಇವರಿಗೆ ಸಲ್ಲಿಸಿರುತ್ತಾರೆ.
ಸದರಿ ವಿಚಾರಣಾ ವರದಿಯಲ್ಲಿ ಬೆಂಗಳೂರು ನಗರ ಜಿಲ್ಲೆ, ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯಕ್ಕೆ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿದ್ದು, ಆದರೆ ಸದರಿ ಟ್ರಸ್ಟ್ ನ ಪದಾಧಿಕಾರಿ ಹೊಂದಾಣಿಕೆ ಇಲ್ಲದೇ ಇರುವುದು ಹಾಗೂ ದೇವಾಲಯಕ್ಕೆ ಲಕ್ಷಾಂತರ ರೂಪಾಯಿ ಪ್ರತಿ ವರ್ಷ ಉಳಿತಾಯವಿಲ್ಲದೇ ವೆಚ್ಚ ಮಾಡಲಾಗುತ್ತಿದೆ. ಇದರಿಂದ ದೇವಸ್ಥಾನದ ಆದಾಯ ಹಣಾ ಬರುತಿಪವಾಗುತ್ತಿರುವಡಾಯವಿಲ್ಲ ‘ತಡಮಾಡಲಾಗುತ್ತಿದ್ದ ದೇದ ರಿಂದಾಯ
ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ಯಾವುದೇ ದಾಖಲೆಗಳನ್ನು ಇಡದೇ ಸಹಾಯಕ ಆಯುಕ್ತರು ಮುಜರಾಯಿ ಇಲಾಖೆ ಇವರು ನೋಟೀಸ್ ನೀಡಿದ ನಂತರ ದಾಖಲೆಗಳನ್ನು ಸೃಷ್ಟಿಸಿರುವುದು ಕಂಡು ಬರುತ್ತದೆ ಹಾಗೂ ಹುಂಡಿಯಲ್ಲಿ ದೇವಾಲಯದ ಸಿಬ್ಬಂದಿಗಳು ಹುಂಡಿ ಹಣ ಕದ್ದಿರುವ ಬಗ್ಗೆ ಸಾಮಾಜಿಕ ಮಾಧಮಗಳಲ್ಲಿ ಪ್ರಸಾರವಾಗಿ ದೇವಾಲಯದ ಮತ್ತು ಭಕ್ತಾಧಿಗಳ ಧಾರ್ಮಿಕ ಭಾವನೆಗಳಿಗೆ ಕುಂದು ಉಂಟು ಮಾಡಲಾಗಿರುತ್ತದೆ. ಆದ್ದರಿಂದ ಸಾರ್ವಜನಿಕ ಹಾಗೂ ಭಕ್ತಾಧಿಗಳ ಹಿತದೃಷ್ಟಿಯಿಂದ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಕಾಯ್ದೆ 1997ರ ಸೆಕ್ಷನ್ 42 ಮತ್ತು 43ರಡಿಯಲ್ಲಿ ಸರ್ಕಾರದ ವಶಕ್ಕೆ ಪಡೆಯುವುದು ಸೂಕ್ತವಾಗಿರುತ್ತದೆ ಎಂಬ ಅಭಿಪ್ರಾಯದ ವಿಚಾರಣಾ ವರದಿಯನ್ನು ಸಲ್ಲಿಸಿರುತ್ತಾರೆ.
ಸದರಿ ವರದಿಯಂತೆ, ಸಾರ್ವಜನಿಕ ಹಾಗೂ ಭಕ್ತಾಧಿಗಳ ಹಿತದೃಷ್ಟಿಯಿಂದ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಕಾಯ್ದೆ 1997ರ ಸೆಕ್ಷನ್ 42 ಮತ್ತು 43ರಡಿಯಲ್ಲಿ ಸರ್ಕಾರದ ವಶಕ್ಕೆ ಪಡೆಯುವುದು ಸೂಕ್ತವಾಗಿರುತ್ತದೆ’ ಎಂದು ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಇವರು ಶಿಫಾರಸ್ಸು ಮಾಡುತ್ತಾರೆ.
ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಬೆಂಗಳೂರು ನಗರ ಜಿಲ್ಲೆ, ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಅವ್ಯವಸ್ಥಿತಿ ರೀತಿಯಲ್ಲಿ ನಿರ್ವಹಿಸುತ್ತಿರುವುದು ಮತ್ತು ಹಣ ದುರುಪಯೋಗಪಡಿಸಿಕೊಂಡಿರುವುದು, ಟಸ್ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ, ಪ್ರಸ್ತಾಪಿತ ದೇವಾಲಯವನ್ನು “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997ರ ಕಲಂ ಸೆಕ್ಷನ್ 42 ಮತ್ತು 43ರನ್ವಯ ಘೋಷಿತ ಸಂಸ್ಥೆ” ಎಂದು ಘೋಷಿಸಿ ಆದೇಶಿಸಿದ್ದಾರೆ.
BREAKING: 30,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಜಿಲ್ಲಾಸ್ಪತ್ರೆ ಸರ್ಜನ್
BREAKING: ‘SSLC ವಿದ್ಯಾರ್ಥಿ’ಗಳ ಮಾರ್ಕ್ಸ್ ಹೆಚ್ಚಿಸಲು ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಆದೇಶ | SSLC Exam 2025