ಬೆಂಗಳೂರು: ಇಂದು ಐತಿಹಾಸಿಕ ಕರಗ ಮಹೋತ್ಸವ ಬೆಂಗಳೂರಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.

ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಏಪ್ರಿಲ್.23ರಂದು ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಅಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ ಎಂದಿದ್ದಾರೆ.

ಕರಗ ಮಹೋತ್ಸವದ ವೇಳೆಯಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗೋ ಸಾಧ್ಯತೆ ಇದೆ. ಹೀಗಾಗಿ ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಈ ಆದೇಶ ಮಾಡಿರೋದಾಗಿ ಹೇಳಿದ್ದಾರೆ.

ಅಂದಹಾಗೇ ವಿಲ್ಸನ್ ಗಾರ್ಡನ್, ಎಸ್ ಜೆ ಪಾರ್ಕ್, ಹಲಸೂರು ಗೇಟ್ ಪೊಲೀಸ್ ಠಾಣೆ ಹಾಗೂ ಎಸ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐತಿಹಾಸಿಕ ಕರಗ ಮಹೋತ್ಸವದಂದು ಮದ್ಯ ಮಾರಾಟ ನಿಷೇಧ ಮಾಡಿ ಆದೇಶಿಸಿದ್ದಾರೆ.

2024-25ರಲ್ಲಿ ಐದು ವರ್ಷಗಳ ಕನಿಷ್ಠ ಮಟ್ಟಕ್ಕೆ ಇಳಿಯಲಿದೆ ಚಿಲ್ಲರೆ ಹಣದುಬ್ಬರ : `CMIE’ ವರದಿ

BREAKING : ಇಸ್ರೇಲ್ ಮೇಲೆ 35 ರಾಕೆಟ್ ದಾಳಿ ನಡೆಸಿದ ಹಿಜ್ಬುಲ್ಲಾ

Share.
Exit mobile version