ಬೆಂಗಳೂರು: ನಗರದ ಕಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ 9 ಮಂದಿಗ ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಟೈಮರ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಮಧ್ಯಾಹ್ನ ಊಟದ ಸಮಯದಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಉಂಟಾಗಿತ್ತು. ಆ ಬಳಿಕ ಅಂದು ಬಾಂಬ್ ಸ್ಪೋಟ ಎಂಬುದಾಗಿ ತಿಳಿದು ಬಂದಿತ್ತು.
ಈ ಘಟನಾ ಸ್ಥಳದಲ್ಲಿ ಪೊಲೀಸರು, ಶ್ವಾನದಳ, ಎಫ್ಎಸ್ಎಲ್ ತಂಡದಿಂತ ಪರಿಶೀಲನೆ, ತನಿಖೆ ನಡೆಸಲಾಗುತ್ತಿದೆ. ಇದೀಗ ತನಿಖೆಯ ವೇಳೆಯಲ್ಲಿ ಘಟನಾ ಸ್ಥಳದಲ್ಲಿ ಟೈಮರ್ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಅದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ‘IED ಬಾಂಬ್ ಸ್ಫೋಟ’: ಘಟನೆ ದೃಢಪಡಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದೃಢಪಡಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಜನಪ್ರಿಯ ಉಪಾಹಾರ ಗೃಹದಲ್ಲಿ ಸಂಭವಿಸಿದ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ.
ಸಿಸಿಟಿವಿ ದೃಶ್ಯಾವಳಿಯಲ್ಲಿ ವ್ಯಕ್ತಿಯೊಬ್ಬ ಕೆಫೆಯಲ್ಲಿ ಚೀಲವನ್ನು ಬಿಟ್ಟು ಹೋಗುತ್ತಿರುವುದು ಕಂಡುಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ದೃಢಪಡಿಸಿದ್ದಾರೆ.
ಆರಂಭಿಕ ವರದಿಗಳು ಚೀಲದಲ್ಲಿದ್ದ ವಸ್ತುವು ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾಯಿತು ಎಂದು ಸೂಚಿಸಿತ್ತು. ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯ ಗೃಹ ಸಚಿವರು ಕೆಫೆಗೆ ತೆರಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು. ತಮ್ಮ ಸರ್ಕಾರದ ಅಡಿಯಲ್ಲಿ ಮೊದಲ ಬಾರಿಗೆ ಸ್ಫೋಟ ಸಂಭವಿಸಿದೆ ಎಂದು ಸಿಎಂ ಹೇಳಿದರು.
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಪ್ರಥಮ ಅಧಿವೇಶನ ‘ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ