ಬೆಂಗಳೂರು: ಬೆಂಗಳೂರು ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ದಿಟ್ಟ ಹೆಜ್ಜೆ ಯನ್ನು ಇರಿಸಿದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ನಗರದ ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳನ್ನು ಎಎಐ (ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ) ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಅನೇಕ ವಿಷಯಗಳ ಕುರಿತು ಪ್ರಸ್ತಾಪ ಮಾಡಿ, ಈ ಸ್ಥಳಗಳಲ್ಲಿರುವ ಸವಾಲುಗಳ ಕುರಿತು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಲಾಗಿದೆ. ಈ ಟೆಂಡರ್’ನಲ್ಲಿ 3-4 ಸಂಸ್ಥೆಗಳು ಭಾಗವಹಿಸಿದ್ದು, ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅವರು ಸಲ್ಲಿಸುವ ವರದಿಯ ಆಧಾರದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪ್ರಸ್ತಾವಿತ ಹೊಸ ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದಿದ್ದಾರೆ.
ಎಚ್ಚರಿಕೆ! ಮುದ್ರಾ ಯೋಜನೆ ಹೆಸರಲ್ಲಿ ₹3 ಲಕ್ಷ ಸಾಲದ ಆಮಿಷ: ವಿಮೆ ಶುಲ್ಕ ಕೇಳುವ ನಕಲಿ ಪತ್ರಕ್ಕೆ ಬಲಿಯಾಗಬೇಡಿ
10,000 ಹಣ ಡ್ರಾ ಮಾಡಲು ಹೋಗಿದ್ದ ವ್ಯಕ್ತಿಗೆ ಎಟಿಎಂ ದೋಷದಿಂದ ಸಿಕ್ತು 3 ಲಕ್ಷ








