ಬೆಂಗಳೂರು: ನಗರದಲ್ಲಿ ಗುತ್ತಿಗೆದಾರರೊಬ್ಬರಿಂದ ಬರೋಬ್ಬರಿ 16 ಲಕ್ಷ ಲಂಚವನ್ನು ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಎಇಇ, ಎಇ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರಿನ ಅವಲಹಳ್ಳಿಯ ವಿಭಾಗದ ಬೆಸ್ಕಾಂ ಎಇಇ ರಮೇಶ್ ಬಾಬು ಹಾಗೂ ಎಇ ನಾಗೇಶ್ ಎಂಬುವರು ಗುತ್ತಿಗೆದಾರರೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು.
ಇಂದು 16 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಾಲೇ ಬೆಸ್ಕಾಂ ಎಇಇ ರಮೇಶ್ ಬಾಬು ಹಾಗೂ ಎಇ ನಾಗೇಶ್ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗೇ ಹಿಡಿದಿದ್ದಾರೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
BREAKING: ಮುಡಾ ಹಗರಣ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಸಿದ್ಧರಾಮಯ್ಯ ಮೇಲ್ಮನವಿ ಸಲ್ಲಿಕೆ
ರಾಜ್ಯದಲ್ಲೊಬ್ಬ ಅಪರೂಪದ ‘ಡೊಳ್ಳು ಕಲಾವಿದ’: ಇವರ ಸಾಧನೆ ಕೇಳಿದ್ರೆ ‘ನೀವೇ ಶಾಕ್’ ಆಗ್ತೀರಿ