ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ಗ್ರಾಹಕರ ಸಮಸ್ಯೆ ಸರಿ ಪಡಿಸೋ ಸಂಬಂಧ ಇದೇ ಜುಲೈ.20ರಂದು ಬೆಸ್ಕಾಂ ಗ್ರಾಹಕರ ಸಭೆಯನ್ನು ನಿಗದಿ ಪಡಿಸಲಾಗಿದೆ. ಆಯಾ ಬೆಸ್ಕಾಂ ವ್ಯಾಪ್ತಿಯ ಕಚೇರಿಗಳಲ್ಲಿ ಗ್ರಾಹಕರ ಸಭೆ ನಡೆಯಲಿದ್ದು, ಗ್ರಾಹಕರು ನಿಮ್ಮ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರವನ್ನು ಪಡೆಯಬಹುದಾಗಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ಬೆಸ್ಕಾಂ ಎಲ್ಲಾ ಕಾರ್ಯ ಮತ್ತು ಪಾಲನಾ ಉಪ ವಿಭಾಗಗಳಲ್ಲಿ ಪ್ರತಿ ತಿಂಗಳು 3ನೇ ಶನಿವಾರದಂದು ಮಧ್ಯಾಹ್ನ 3 ಗಂಟೆಯಿಂದ 5.30ರವರೆಗೆ ಗ್ರಾಹಕರ ಸಂವಾದ ಸಭೆಯನ್ನು ನಿಗದಿ ಪಡಿಸಲಾಗಿದೆ ಅಂತ ತಿಳಿಸಿದೆ.
ಈ ಗ್ರಾಹಕರ ಸಂವಾದ ಸಭೆಗಳಲ್ಲಿ ಗ್ರಾಹಕ ಬಾಂಧವರು ಪಾಲ್ಗೊಂಡು, ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ, ಪರಿಹರಿಸಿಕೊಳ್ಳುವಂತೆ ಮನವಿ ಮಾಡಿದೆ.
ಅಂದಹಾಗೆ ಜುಲೈ.20ರಂದು ಬೆಸ್ಕಾಂ ವ್ಯಾಪ್ತಿಯ ಎಲ್ಲಾ ಕಾರ್ಯ ಮತ್ತು ಪಾಲನಾ ಉಪ ವಿಭಾಗಗಳಲ್ಲಿ ಗ್ರಾಹಕರ ಸಂವಾದ ಸಭೆ ನಡೆಯಲಿದೆ. ಅಂದು ಭಾಗಿಯಾಗಿ, ಬೆಸ್ಕಾಂ ವಿದ್ಯುತ್ ಗ್ರಾಹಕರು ತಮ್ಮ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರವನ್ನು ಪಡೆಯಬಹುದಾಗಿದೆ.
ಇನ್ಮುಂದೆ ‘ಅಂಗಾಂಗ ದಾನಿ’ಗಳಿಗೆ ಸ್ವಾತಂತ್ರ್ಯ, ಗಣರಾಜ್ಯೋತ್ಸವ ದಿನದಂದು ‘ಪ್ರಶಂಸಾ ಪತ್ರ’ ನೀಡಿ ಗೌರವ