ಕೋಲಾರ : ಇತ್ತೀಚಿನ ದಿನಗಳಲ್ಲಿ ಹೃದಯಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಿದ್ದನಹಳ್ಳಿಯಲ್ಲಿ ಬೆಸ್ಕಾಂ ಸಿಬ್ಬಂದಿ ಒಬ್ಬರು ಮನೆಯೊಂದಕ್ಕೆ ಕರೆಂಟ್ ಬಿಲ್ ನೀಡುವ ಸಂದರ್ಭದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ.
ಹೌದು ಹೃದಯಾಘಾತದಿಂದ ಕರ್ತವ್ಯ ನಿರತ ಬೆಸ್ಕಾಂ ಸಿಬ್ಬಂದಿ ಸಾವನ್ನಾಪ್ಪಿದ್ದರೆ. ಸಿದ್ದನಹಳ್ಳಿ ಬೆಸ್ಕಾಂ ಸಿಬ್ಬಂದಿ ಪ್ರಕಾಶ್ ಕುಮಾರ್ ಎನ್ನುವವರು ಸಾವನ್ನಪ್ಪಿದ್ದಾರೆ.. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಿದ್ದನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಸಿದ್ದನನಹಳ್ಳಿಯಲ್ಲಿ ವಿದ್ಯುತ್ ಬಿಲ್ ಕೊಡುವಾಗ ಹೃದಯಾಘಾತವಾಗಿದೆ. ಮೃತನ ಕುಟುಂಬಕ್ಕೆ ಇದೀಗ ಸಿಬ್ಬಂದಿಗಳು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಘಟನೆ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ