ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಗ್ರಾಹಕರು ಇನ್ನು ಮುಂದೆ ವಾಟ್ಸಪ್ ಮೂಲಕವೇ ವಿದ್ಯುತ್ ಕುರಿತ ಸಮಸ್ಯೆಗಳು ಬಗೆಹರಿಸಿಕೊಳ್ಳಬಹುದು. ಈ ಸಂಬಂಧ ಬೆಸ್ಕಾಂ ಎಂಟು ಜಿಲ್ಲೆಗಳಲ್ಲಿ ವಾಟ್ಸಪ್ ಸಹಾಯವಾಣಿ ಸಂಖ್ಯೆ ಪರಿಚಯಿಸಿದೆ.
ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳ ಗ್ರಾಹಕರು ವಾಟ್ಸಪ್ ಸಹಾಯವಾಣಿ ಸಂಖ್ಯೆಗೆ ವಿದ್ಯುತ್ ಬಗೆಗಿನ ಸಮಸ್ಯೆಗಳ ಕುರಿತು ಫೋಟೊ, ವೀಡಿಯೊಗಳನ್ನು ಹಂಚಿಕೊಳ್ಳಬಹುದು ಅಥವಾ ಸಂದೇಶವನ್ನು ಕಳುಹಿಸಬಹುದು. ವಿದ್ಯುತ್ ಬಗ್ಗೆ ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳಬಹುದು.