Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1 ರೂ. ಕೊಡದೆ ಆನ್ಲೈನ್’ನಲ್ಲಿ ಫೋನ್ ಬುಕ್ ಮಾಡಿ, ಅಂಗಡಿಗೆ ಹೋಗಿ ತಕ್ಷಣ ಪಡೆಯಿರಿ, ಬಜಾಜ್ ಫೈನಾನ್ಸ್ ಬಂಪರ್ ಆಫರ್!

20/02/2026 4:20 PM

ಏಪ್ರಿಲ್ 2026ರಿಂದ ಫೇಸ್‌ಬುಕ್ ಮೆಸೆಂಜರ್ ವೆಬ್‌ಸೈಟ್ ಸ್ಥಗಿತಕ್ಕೆ ಮೆಟಾ ನಿರ್ಧಾರ | Facebook Messenger

20/02/2026 4:20 PM

ಬೆಂಗಳೂರಲ್ಲಿ CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

20/02/2026 4:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ಗೈಡ್ ಲೈನ್ಸ್ ಪ್ರಕಟ : ಗಣಪತಿ ಮೆರವಣಿಗೆ, ವಿಸರ್ಜನೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ!
KARNATAKA

ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ಗೈಡ್ ಲೈನ್ಸ್ ಪ್ರಕಟ : ಗಣಪತಿ ಮೆರವಣಿಗೆ, ವಿಸರ್ಜನೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ!

By kannadanewsnow5704/09/2024 10:55 AM

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, “ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,” ಎಂದು ತಿಳಿಸಿದೆ.

“ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಬೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್‌ ಅವಘಡಗಳಾಗದಂತೆ ಎಚ್ಚರವಹಿಸಿ,” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಮನವಿ ಮಾಡಿದ್ದಾರೆ.

ಸುರಕ್ಷತಾ ಕ್ರಮಗಳು:

* ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.
* ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.
* ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯದಿರಿ.
* ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ.
* ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತನ್ನಿ, ಅವರು ಅಗತ್ಯ ನೆರವು ಒದಗಿಸುವರು.
•ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ.
* ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ “ಡೇಂಜರ್ ಜೋನ್” ಎಂದು ಸೂಚಿಸಬೇಕು.

ತಾತ್ಕಲಿಕ ಸಂಪರ್ಕದ ಮಾಹಿತಿ:

* ತಾತ್ಕಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ, ಎಲ್ಲಾ ಸಂಬಂಧಿತ (ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು.
* ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಥವಾ ಸಹಾಯಕ ಇಂಜಿನಿಯರ್‌ಗಳು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲು ನಿರ್ಮಾಣ ಮಾಡಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸುತ್ತಾರೆ.
* ವೈರಿಂಗ್ ಸುರಕ್ಷತೆ, ಎಂ.ಸಿ.ಬಿ ಮತ್ತು ಇಐಎ ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿಯನ್ನು ಪಡೆದು ಸ್ಥಳ ಪರಿಶೀಲಿಸಿದ ನಂತರ ಸಂಪರ್ಕ ಕಲ್ಪಿಸಲಾಗುವುದು.
* ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು.

Bescom issues guidelines for Ganeshotsav: It is mandatory to follow these rules during Ganpati processions and visarjans. ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ಗೈಡ್ ಲೈನ್ಸ್ ಪ್ರಕಟ : ಗಣಪತಿ ಮೆರವಣಿಗೆ ವಿಸರ್ಜನೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ!
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

20/02/2026 4:07 PM1 Min Read

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ

20/02/2026 3:58 PM1 Min Read

BREAKING: ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ

20/02/2026 3:57 PM1 Min Read
Recent News

1 ರೂ. ಕೊಡದೆ ಆನ್ಲೈನ್’ನಲ್ಲಿ ಫೋನ್ ಬುಕ್ ಮಾಡಿ, ಅಂಗಡಿಗೆ ಹೋಗಿ ತಕ್ಷಣ ಪಡೆಯಿರಿ, ಬಜಾಜ್ ಫೈನಾನ್ಸ್ ಬಂಪರ್ ಆಫರ್!

20/02/2026 4:20 PM

ಏಪ್ರಿಲ್ 2026ರಿಂದ ಫೇಸ್‌ಬುಕ್ ಮೆಸೆಂಜರ್ ವೆಬ್‌ಸೈಟ್ ಸ್ಥಗಿತಕ್ಕೆ ಮೆಟಾ ನಿರ್ಧಾರ | Facebook Messenger

20/02/2026 4:20 PM

ಬೆಂಗಳೂರಲ್ಲಿ CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

20/02/2026 4:07 PM

ಉದ್ಯೋಗ ಮಾರುಕಟ್ಟೆಯಲ್ಲಿ AI ‘ಸುನಾಮಿ’ಯ ಎಚ್ಚರಿಕೆ ನೀಡಿದ ‘IMF ಮುಖ್ಯಸ್ಥ’ ; ಶೇ.0.8 ರಷ್ಟು ಏರಿಕೆ!

20/02/2026 3:59 PM
State News
KARNATAKA

ಬೆಂಗಳೂರಲ್ಲಿ CCB ಪೊಲೀಸರಿಂದ ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

By kannadanewsnow0920/02/2026 4:07 PM KARNATAKA 1 Min Read

ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದ ದೂರುದಾರನನ್ನೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಮುಡಾ…

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ

20/02/2026 3:58 PM

BREAKING: ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ

20/02/2026 3:57 PM

CCB ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅರೆಸ್ಟ್

20/02/2026 3:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.