ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾದಾಗ ಅದನ್ನು ಪರಿಹರಿಸೋದಕ್ಕಾಗಿ ಬೆಸ್ಕಾಂನಿಂದ ತನ್ನ ಗ್ರಾಹಕರಿಗಾಗಿ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದಿದೆ.

ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್‌ ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ. ವಾಟ್ಸ್‌ಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ಎಸ್‌ ಎಂಎಸ್ ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ ಎಂದು ತಿಳಿಸಿದೆ.

ಹೀಗಿದೆ ಜಿಲ್ಲಾವಾರು ವಾಟ್ಸ್‌ ಆಪ್‌ ಸಂಖ್ಯೆಗಳು

ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ- 8277884020 ಹಾಗೂ ದಾವಣಗೆರೆ- 8277884021. ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್‌ ಆಪ್‌ ಸಂಖ್ಯೆ – 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್‌ ಆಪ್‌ ಸಂಖ್ಯೆ- 9449844640.

ಈ ಕೆಳಗಿನ ಮೊಬೈಲ್‌ ಸಂಖ್ಯೆಗಳು- ಕೇವಲ ಎಸ್‌ಎಂಎಸ್‌ ಗಳಿಗೆ ಮಾತ್ರ

9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

ಚುನಾವಣಾ ಚರ್ಚೆಯಲ್ಲಿ ಚರ್ಮದ ಬಣ್ಣವನ್ನು ತರುವ ಮೂಲಕ ಪ್ರಧಾನಿ ‘ಜನಾಂಗೀಯವಾದಿ’ ಆಗಿದ್ದಾರೆ : ಚಿದಂಬರಂ

ಕುಮಾರಸ್ವಾಮಿ ಮಗಳ ವಯಸ್ಸಿನವಳನ್ನು ಮದುವೆಯಾಗಿದ್ದಾರೆ: ಕಾಂಗ್ರೆಸ್‌ ಶಾಸಕ ಎಸ್‌ಆರ್‌ ಶ್ರೀನಿವಾಸ್‌

‘SSLC ಪರೀಕ್ಷೆಯಲ್ಲಿ ಫೇಲ್’ ಆದ ವಿದ್ಯಾರ್ಥಿಗಳೇ ಗಮನಿಸಿ: ‘ಮರು ಪರೀಕ್ಷೆ’ ದಿನಾಂಕ ಪ್ರಕಟ | SSLC Main Exam-2 Timetable

Share.
Exit mobile version