ಬೆಂಗಳೂರು : ರಾಜ್ಯದಲ್ಲಿ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ. ಭ್ರೂಣ ಲಿಂಗ ಪತ್ತೆ ಮಾಡಿದ್ರೆ ಐದು ವರ್ಷ ಜೈಲು ಶಿಕ್ಷೆ ಜೊತೆಗೆ 50 ಸಾವಿರ ರೂ.ವರೆಗೆ ದಂಡ ವಿಧಿಸಲಾಗುತ್ತದೆ.
ವೈದ್ಯರು ಭ್ರೂಣ ಲಿಂಗ ಪತ್ತೆ ಮಾಡಿದ್ದಲ್ಲಿ ಅವರಿಗೆ ಮೊದಲನೆ ಅಪರಾಧಕ್ಕೆ 3 ವರ್ಷಗಳವರೆಗೆ ಜೈಲು ಶಿಕ್ಷೆಯ ಜೊತೆಗೆ ₹10,000 ದವರೆಗೆ ದಂಡ ವಿಧಿಸಲಾಗುವುದು. ಜೊತೆಗೆ ವೈದ್ಯಕೀಯ ವೃತ್ತಿ ಮಾಡದಂತೆ ರಾಜ್ಯ ವೈದ್ಯಕೀಯ ಮಂಡಳಿಯಿಂದ ಅವರ ಹೆಸರನ್ನು ಐದು ವರ್ಷಗಳವರೆಗೆ ತೆಗೆದು ಹಾಕಲಾಗುವುದು.
ಇದೇ ಅಪರಾಧ ಮತ್ತೊಮ್ಮೆ ಮಾಡಿದ್ದಲ್ಲಿ 5 ವರ್ಷಗಳವರೆಗೆ ಜೈಲು ಶಿಕ್ಷೆ ಜೊತೆಗೆ ₹50,000 ದವರೆಗೆ ದಂಡ ವಿಧಿಸಲಾಗುವುದು. ಅಲ್ಲದೇ, ಶಾಶ್ವತವಾಗಿ ಅವರ ಹೆಸರನ್ನು ರಾಜ್ಯ ವೈದ್ಯಕೀಯ ಮಂಡಳಿಯಿಂದ ತೆಗೆದು ಹಾಕಲಾಗುವುದು.