ಬೆಂಗಳೂರು: ರಾಜ್ಯ ಸರ್ಕಾರದಿಂದ ವಕೀಲರಿಗೆ ಭದ್ರತೆ ನೀಡುವ ಸಂಬಂಧ ಮಹತ್ವದ ಕ್ರಮ ವಹಿಸಿದೆ. ಇದಕ್ಕಾಗಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023 ಜಾರಿಗೊಳಿಸಿದೆ. ಒಂದು ವೇಳೆ ವಕೀಲರ ಮೇಲೆ ಹಲ್ಲೆ ಮಾಡಿದ್ರೆ ಈ ನಿಯಮದಡಿ ಜೈಲು ಶಿಕ್ಷೆ ಫಿಕ್ಸ್ ಆಗಿದೆ.
ಹೌದು. ರಾಜ್ಯದಲ್ಲಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ – 2023 ಜಾರಿ ಮಾಡಲಾಗಿದೆ. ಈ ನಿಯಮವನ್ನು ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಜಾರಿಗೊಳಿಸಿದೆ.
ಈ ನಿಯಮದಂತೆ ಕರ್ತವ್ಯದ ವೇಳೆ ವೃತ್ತಿಪರ ವಕೀಲರ ಮೇಲೆ ಹಲ್ಲೆ ನಡೆಸುವುದು, ಅವರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು ಅಥವಾ ಕಿರುಕುಳ ನೀಡುವುದು ಶಿಕ್ಷಾರ್ಹ ಅಪರಾಧವಾಗಿದೆ.
ಒಂದು ವೇಳೆ ನೀವು ಈ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ 6 ತಿಂಗಳಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹1 ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ.
ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ – 2023 ಜಾರಿ ಮಾಡಲಾಗಿದೆ. ಅದರಂತೆ ಕರ್ತವ್ಯದ ವೇಳೆ ವೃತ್ತಿಪರ ವಕೀಲರ ಮೇಲೆ ಹಲ್ಲೆ ನಡೆಸುವುದು, ಅವರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು ಅಥವಾ ಕಿರುಕುಳ ನೀಡುವುದು ಶಿಕ್ಷಾರ್ಹ ಅಪರಾಧವಾಗಿದೆ. ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ 6 ತಿಂಗಳಿಂದ 3 ವರ್ಷಗಳವರೆಗೆ… pic.twitter.com/0geOqFxs9Z
— DIPR Karnataka (@KarnatakaVarthe) June 13, 2024