ಬೆಂಗಳೂರು : ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ. ಆನ್‌ ಲೈನ್‌ ಗೇಮಿಂಗ್‌ ಚಟಕ್ಕೆ ಬಿದ್ದಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆನ್‌ ಲೈನ್‌ ಗೇಮಿಂಗ್‌ ನಲ್ಲಿ ವಿದ್ಯಾರ್ಥಿನಿಯೊಬ್ಬಳು ಪೋಷಕರು ನೀಡಿದ್ದ ಕಾಲೇಜು ಶುಲ್ಕವನ್ನು ಕಳೆದುಕೊಂಡು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಹಾರಾಣಿ ಕ್ಲಸ್ಟರ್‌ ವಿಶ್ವವಿದ್ಯಾಲಯದ ಪಾವನಾ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ, ಭಾನುವಾರ ರಾತ್ರಿ ಸುಮಾರು 11 ಗಂಟೆಗೆ ವಿಶ್ವವಿದ್ಯಾಲಯದ ಹಾಸ್ಟೆಲ್‌ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾವನಾ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಮೂಲದವರಾಗಿದ್ದು, ಮಹಾರಾಣಿ ಕ್ಲಸ್ಟರ್‌ ವಿಶ್ವವಿದ್ಯಾಲಯದಲ್ಲಿ ಬಿಎಸ್‌ ಸಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಘಟನಾ ಸ್ಥಳದಲ್ಲಿ ಡೆತ್‌ ನೋಟ್‌ ಪತ್ತೆಯಾಗಿದ್ದು, ಆನ್‌ ಲೈನ್‌ ನಲ್ಲಿ ಹಣ ಹೂಡಿಕೆ ಮಾಡಿ ನಷ್ಟಕ್ಕೆ ಒಳಗಾಗಿರುವುದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುತ್ತಿರುವುದಾಗಿ ಪಾವನಾ ಡೆತ್‌ ನೋಟ್ನಲ್ಲಿ ಉಲ್ಲೇಳಿಸಿದ್ದಾಳೆ. ಪೊಲೀಸರು ಮೃತಳ ಪೋಷಕರಿಗೆ ವಿಷಯ ತಿಳಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಪೋಷಕರಿಗೆ ಒಪ್ಪಿಸಲಾಗಿದೆ.

Share.
Exit mobile version