ಬೆಂಗಳೂರು: ರಾಜ್ಯ ಸರ್ಕಾರದಿಂದ ವೈದ್ಯಕೀಯ ಸಿಬ್ಬಂದಿಗಳ ಶ್ರೋಯೋಭಿವೃದ್ಧಿಗೆ ಬದ್ಧತೆಯ ನಡೆ ತೋರಿಸಿದೆ. ಅಲ್ಲದೇ ವೃತ್ತಿ ನಿರತ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ ತಡೆಗೆ ಮಸೂದೆ ಅಂಗೀಕರಿಸಿದೆ. ಹೀಗಾಗಿ ವೃತ್ತಿನಿರತ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ರೇ ಶಿಕ್ಷೆ ಫಿಕ್ಸ್ ಆದ್ರೇ, ಭಾರೀ ದಂಡವನ್ನೂ ವಿಧಿಸಲಾಗುತ್ತದೆ.
ಹೌದು. ವೃತ್ತಿಪರ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲೆ ಹಿಂಸಾಚಾರ, ಹಲ್ಲೆ, ಅಪಮಾನ ಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ನಿಂದನೆ ಮಾಡಿದ್ದಲ್ಲಿ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ, ₹25 ಸಾವಿರದಿಂದ ₹2 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಹಾಗೂ ವೃತ್ತಿಪರ ವೈದ್ಯರಿಗೆ ನೋಂದಣಿ ಕಡ್ಡಾಯ ಮಾಡುವ ಮಹತ್ವದ ಮಸೂದೆಯನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಅಂಗೀಕರಿಸಲಾಗಿದೆ.
ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಗಟ್ಟಲು ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರೊಂದಿಗೆ ನಕಲಿ ವೈದ್ಯ ವೃತ್ತಿಯಲ್ಲಿ ತೊಡಗಿರುವವರಿಗೆ ₹10 ಸಾವಿರದಿಂದ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು. ಈ ಮೂಲಕ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧತೆಯನ್ನು ತೋರಿದೆ.
ವೃತ್ತಿಪರ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲೆ ಹಿಂಸಾಚಾರ, ಹಲ್ಲೆ, ಅಪಮಾನ ಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ನಿಂದನೆ ಮಾಡಿದ್ದಲ್ಲಿ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ, ₹25 ಸಾವಿರದಿಂದ ₹2 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಹಾಗೂ ವೃತ್ತಿಪರ ವೈದ್ಯರಿಗೆ ನೋಂದಣಿ ಕಡ್ಡಾಯ ಮಾಡುವ ಮಹತ್ವದ ಮಸೂದೆಯನ್ನು ವಿಧಾನ ಮಂಡಲದ ಉಭಯ… pic.twitter.com/mctpjhdYtD
— DIPR Karnataka (@KarnatakaVarthe) July 27, 2024
BREAKING: ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ, ಜೈಲುಪಾಲು | Puneet Kerehalli
ಸಾರ್ವಜನಿಕರ ಗಮನಕ್ಕೆ: ‘ಮುತ್ತತ್ತಿ ಪ್ರವಾಸಿ ತಾಣ’ಕ್ಕೆ ಪ್ರವಾಸಿಗರ ಭೇಟಿಗೆ ನಿಷೇಧ