ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ತಳಿ ಬಿಎಫ್. 7. ಭೀತಿ ಶುರುವಾಗಿದೆ. ಇದೀಗ ರೂಪಾಂತರಿ ತಳಿ ಬಿಎಫ್. 7. ಎದುರಿಸಲು ಆರೋಗ್ಯ ಇಲಾಖೆ ಸಜ್ಜಾಗಿದೆ.
BIGG NEWS: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ; ಇವತ್ತು ಹೈ ವೋಲ್ಟೇಜ್ ಸಭೆ
ಬೆಂಗಳೂರು ನಗರದ ಆಸ್ಪತ್ರೆಗಳಲ್ಲಿ ಇಂದು ಮೌಕ್ ಡ್ರಿಲ್ ಶುರುವಾಗಿದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆ, ಕೆ.ಸಿ ಜನರಲ್ ಆಸ್ಪತ್ರೆ . ಜಯನಗರ ಸಾರ್ವಜನಿಕ ಆಸ್ಪತ್ರೆ . ಸಿ.ವಿ ರಾಮನ್ ನಗರ ಆಸ್ಪತ್ರೆ ESI ಆಸ್ಪತ್ರೆ , ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮೌಕ್ ಡ್ರಿಲ್ ಶುರು ಮಾಡಿದ್ದಾರೆ. ಎಲ್ಲಾ ವಿಬಾಗಗಳಲ್ಲಿ ಮೌಕ್ ಡ್ರಿಲ್ , ಆಕ್ಸಿಜನ್ ಪ್ಲಾಂಟ್ ಡ್ರೈರನ್ ಆಪರೇಟಿಂಗ್ ಕಾರ್ಯವಿಧಾನವನ್ನು ಮೌಲ್ಯಮಾಪನ ಮಾಡಲಾಗುವುದು.
BIGG NEWS: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ; ಇವತ್ತು ಹೈ ವೋಲ್ಟೇಜ್ ಸಭೆ
ಆಕ್ಸಿಜನ್ ಪೂರೈಕೆ, ಬೆಡ್ಗಳ ಸಿದ್ಧತೆ, ಔಷಧಗಳ ಪರಿಶೀಲನೆ ನಡೆಸಿ ಮಾಹಿತಿ ಪಡೆಯಲು ಆರೋಗ್ಯ ಇಲಾಖೆ ಮುಂದಾಗಿದೆ. ಆಕ್ಸಿಜನ್ ಪ್ಲಾಂಟ್ಗಳಲ್ಲಿ ಡ್ರೈರನ್ ಮಾಡಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆಕ್ಸಿಜನ್ ಪ್ಲಾಂಟ್ಗಳು ಸರಿಯಾಗಿವೆಯೇ ಎಂದು ಪರೀಶಿಲನೆ ನಡೆಸಲಾಗುತ್ತಿದೆ. ಈ ಹಿಂದೆ ಸರಿಯಾದ ಮಾಹಿತಿ ಹಾಗೂ ಆಕ್ಸಿಜನ್ ಕೊರತೆಯಿಂದ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಕ್ಕಿರಲಿಲ್ಲ. ಆದ್ರೀಗ ರೂಪಾಂತರಿ ಆತಂಕ ಇರೋದ್ರಿಂದ ಮೌಕ್ ಡ್ರಿಲ್ ಮಾಡಲು ಇಲಾಖೆ ಮುಂದಾಗಿದೆ. ಈ ಮೌಕ್ ಡ್ರಿಲ್ನಲ್ಲಿ ಆಯಾ ಆಸ್ಪತ್ರೆಗಳಿಗೆ ಬೇಕಿರೋ ಸೌಲಭ್ಯಗಳ ಬಗ್ಗೆ ಮನವಿ ಮಾಡಲಾಗುವುದು.
ಇನ್ನು ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೊಸ ತಳಿ ಬಿಎಫ್.7 ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಹರಡುವ ಭೀತಿ ಶುರುವಾಗಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕಾಗಿ ಫುಲ್ ಅಲರ್ಟ್ ಆಗಿದೆ. ಈಗಾಗಲೇ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಕೊರೊನಾ ನಿಯಮ ಜಾರಿಗೆ ತಂದಿದ್ದಾರೆ. ಪ್ರಾಥಮಿಕ ಹಂತದಲ್ಲಿ ಜನರಿಗೆ ಸಮಸ್ಯೆಯಾಗದಂತೆ ಕೆಲ ಸರಳ ರೂಲ್ಸ್ಗಳನ್ನ ಸರ್ಕಾರ ಹೊರಡಿಸಿದೆ. ಶಾಲೆ, ಕಾಲೇಜುಗಳಲ್ಲಿ, ಥಿಯೇಟರ್, ಮಾಲ್, ಮಾರ್ಕೆಟ್ನಲ್ಲಿ ಮಾಸ್ಕ ಕಡ್ಡಾಯ ಮಾಡಲಾಗಿದೆ