ವಿಜಯಪುರ : ಕಳೆದ ಕೆಲವು ದಿನಗಳ ಹಿಂದೆ ವಿಜಯಪುರದ ಮದಿನಾನ ನಗರದ ಬಳಿ ಭೀಮಾ ತೀರದ ಹಂತಕ ಭಾಗಪ ಹರಿಜನನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದಿತ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರದ 2ನೇ ಹೆಚ್ಚುವರಿ ಮತ್ತು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿಗಳಾದ ಪ್ರಕಾಶ್ ಮೇಲಿನಕೇರಿ ಅಲಿಯಾಸ್ ಪಿಂಟ್ಯಾ, ರಾಹುಲ್ ತಳಕೇರಿ, ಮಣಿಕಂಠ ಬೆನಕಪ್ಪ ಹಾಗೂ ಸುದೀಪ್ ಕಾಂಬಳೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರದ 2ನೇ ಹೆಚ್ಚುವರಿ ಮತ್ತು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಕರಣ ಹಿನ್ನೆಲೆ
ಫೆಬ್ರವರಿ 11 ರಂದು ರಾತ್ರಿ ವಿಜಯಪುರ ನಗರದ ಮದೀನಾ ನಗರದ ಬಾಡಿಗೆ ಮನೆಯಲ್ಲಿದ್ದ ಭೀಮಾತೀರದ ಹಂತಕ ಬಾಗಪ್ಪ ಹರಿಜನನ್ನು ಪ್ರಕಾಶ ಅಲಿಯಾಸ್ ಪಿಂಟ್ಯಾ, ರಾಹುಲ ಭೀಮಾಶಂಕರ ತಳಕೇರಿ, ಸುದೀಪ ಕಾಂಬಳೆ ಹಾಗೂ ಮಣಿಕಂಠ ಅಲಿಯಾಸ್ ಗದಿಗೆಪ್ಪ ಶಂಕ್ರಪ್ಪ ಬೆನಕೊಪ್ಪ ಭಾಗಪ್ಪನನ್ನು ಕೊಡಲಿ ಮತ್ತು ತಲ್ವಾರ್ನಿಂದ ಕೊಚ್ಚಿ ಹಾಕಲಾಗಿತ್ತು. ಎಡ ಮುಂಗೈ ಕಟ್ ಆಗಿ ಬಿದ್ದಿತ್ತು. ನಂತರ ಆತನ ಮೇಲೆ ಕಂಟ್ರಿ ಪಿಸ್ತೂಲ್ನಿಂದ ಗುಂಡು ಹಾರಿಸಿ ಬಾಗಪ್ಪ ಮೃತಪಟ್ಟ ಎಂದು ದೃಢ ಪಡಿಸಿಕೊಂಡು ಪರಾರಿಯಾಗಿದ್ದರು.
ವಿಚಾರ ತಿಳಿದು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್ಪಿಗಳಾದ ಶಂಕರ ಮಾರೀಹಾಳ, ರಾಮನಗೌಡ ಹಟ್ಟಿ, ಡಿವೈಎಸ್ಪಿ ಬಸವರಾಜ ಯಲಿಗಾರ, ಇನ್ಸಪೆಕ್ಟರ್ ಪ್ರದೀಪ್ ತಳಕೇರಿ ಹಾಗೂ ಇತರೆ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕೊಲೆ ಮಾಡಿ ಪರಾರಿಯಾಗಿದ್ದ ಗ್ಯಾಂಗ್ ಬಂಧಿಸಲು ಈ ನಿಟ್ಟಿನಲ್ಲಿ ವಿಶೇಷ ತಂಡಗಳನ್ನು ರಚನೆ ಮಾಡಿದ್ದ ಎಸ್ಪಿ ಲಕ್ಷ್ಮಣ ನಿಂಬರಗಿ ಬಾಗಪ್ಪನ ಕೊಲೆಗೈದವರನ್ನು ನಗರದ ಇಟಗಿ ಪಂಪ್ ಬಳಿ ವಶಕ್ಕೆ ಪಡೆದರು.