ಭಾರತ್ ಜೋಡೋ ನ್ಯಾಯ್ ಯಾತ್ರೆ: ಕಾಂಗ್ರೆಸ್ ಪಕ್ಷದಿಂದ ರಾಹುಲ್ ಗಾಂಧಿ ಪಾದಯಾತ್ರೆಯ ‘ಲಾಂಛನ’ ಅನಾವರಣ

ನವದೆಹಲಿ: ಜನವರಿ 14 ರಿಂದ ಪ್ರಾರಂಭವಾಗಲಿರುವ ರಾಹುಲ್ ಗಾಂಧಿ ಅವರ ಮುಂಬರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ( Bharat Jodo Nyay Yatra ) ಲಾಂಛನವನ್ನು ಕಾಂಗ್ರೆಸ್ ಉನ್ನತ ನಾಯಕರು ಶನಿವಾರ ಅನಾವರಣಗೊಳಿಸಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ಜೈರಾಮ್ ರಮೇಶ್ ಮತ್ತು ಕೆ.ಸಿ.ವೇಣುಗೋಪಾಲ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಲಾಂಛನವನ್ನು ಅನಾವರಣಗೊಳಿಸಿದರು. ನಿನ್ನೆಯಷ್ಟೇ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಹೆಸರನ್ನು ಮರು ನಾಮಕರಣಗೊಳಿಸಲಾಗಿತ್ತು. ಭಾರತ್ ಜೋಡೋ ಯಾತ್ರೆಯ ಬದಲಾಗಿ ಭಾರತ್ ಜೋಡೋ ನ್ಯಾಯ್ … Continue reading ಭಾರತ್ ಜೋಡೋ ನ್ಯಾಯ್ ಯಾತ್ರೆ: ಕಾಂಗ್ರೆಸ್ ಪಕ್ಷದಿಂದ ರಾಹುಲ್ ಗಾಂಧಿ ಪಾದಯಾತ್ರೆಯ ‘ಲಾಂಛನ’ ಅನಾವರಣ