ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆರಂಭಿಸಿರುವ ಭಾರತ ಜೋಡೋ ಯಾತ್ರೆಗೆ ಸಂಬಂಧಿಸಿದಂತೆ ನಿನ್ನೆ ಅಸ್ಸಾಂನಲ್ಲಿ ದೇವಸ್ಥಾನ ಹೊಂದಕ್ಕೆ ರಾಹುಲ್ ಗಾಂಧಿ ಅವರಿಗೆ ಪ್ರವೇಶಿಸಲು ನಿರ್ಬಂಧ ವಿಧಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನವಿದ್ದು ಅಸ್ಸಾಂ ಬಿಜೆಪಿ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಅದರ ಅಂಗವಾಗಿ ಅಸ್ಸಾಂ ಬಿಜೆಪಿ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು ರಾಹುಲ್ ಗಾಂಧಿ ಭರತ್ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ಬಿಜೆಪಿ ಸರ್ಕಾರ ತಡೆಯೊಡ್ಡಿದ ವಿಚಾರವಾಗಿ ಬಟ್ ದ್ರವಥನ ದೇವಸ್ಥಾನ ಪ್ರವೇಶಿಸಲು ರಾಹುಲ್ ಗೆ ನಿರ್ಬಂಧಿಸಿದ್ದು ಅಸ್ಸಾಂ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿ ಇದೀಗ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಇದೀಗ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಸಚಿವರು ಶಾಸಕರು, ಕಾರ್ಯಕರ್ತರು ಸೇರಿದಂತೆ ಪ್ರತಿಭಟನೆಯಲ್ಲಿ ಅನೇಕ ಜನರು ಭಾಗಿಯಾಗಿದ್ದಾರೆ.
ಇದೇ ವಿಚಾರವಾಗಿ ರಾಜ್ಯದ ವಿವಿಧಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದ್ದು ರಾಯಚೂರು ಶಿವಮೊಗ್ಗದಲ್ಲಿ ಕೂಡ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಬಿಜೆಪಿ ವರ್ತನೆ ಖಂಡಿಸಿ ಕೈ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ ಅಸಮ್ ಸರ್ಕಾರದ ವಿರುದ್ಧ ದಿಕ್ಕಾರ ಹೋಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಅದೇ ರೀತಿ ರಾಯಚೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಧರಣಿ ಹಮ್ಮಿಕೊಳ್ಳಲಾಗಿದ್ದು ಬಿಜೆಪಿ ವರ್ತನೆ ಖಂಡಿಸಿ ಕೈ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ ರಾಹುಲ್ ಗಾಂಧಿಗೆ ನಿರ್ಬಂಧಿಸಿ ಅಸ್ಸಾಂ ಸರ್ಕಾರದ ವಿರುದ್ಧ ಅಧಿಕಾರಕ್ಕಾಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.