ಚಾಮರಾಜನಗರ : ನಾಳೆ ಗುಂಡ್ಲು ಪೇಟೆಗೆ ಭಾರತ್ ಜೋಡೋ ಯಾತ್ರೆ ಆಗಮಿಸಲಿದ್ದು, ಈ ಹಿನ್ನೆಲೆ ಕಾಂಗ್ರೆಸ್ ತಯಾರಿ ಜೋರಾಗಿದೆ.
ಇದರ ನಡುವೆ ಗುಂಡ್ಲುಪೇಟೆಯಲ್ಲಿ ಕಿಡಿಗೇಡಿಗಳು ಭಾರತ್ ಜೋಡೋ ಯಾತ್ರೆಯ ಸ್ವಾಗತ ಫ್ಲೆಕ್ಸ್ ಗಳನ್ನು ಹರಿದು ಹಾಕಿದ್ದಾರೆ. ಭಾರತ್ ಜೋಡೋ ಯಾತ್ರೆ ಆಗಮಿಸಲಿರುವ ಹಿನ್ನೆಲೆ ಸ್ವಾಗತ ಕೋರಿ ಫ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಫ್ಲೆಕ್ಸ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ನಾಳೆ ಚಾಮರಾಜನಗರ ಜಿಲ್ಲೆಗೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಆಗಮಿಸಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಎಲ್ಲಾ ಸಿದ್ದತೆ ನಡೆಸಿದ್ದಾರೆ. ನಗರದ ಹಲವು ಕಡೆ ಬ್ಯಾನರ್, ಫ್ಲೆಕ್ಸ್ ಗಳು ರಾರಾಜಿಸುತ್ತಿದೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ ‘ಭಾರತ್ ಜೋಡೋ ಯಾತ್ರೆ’ ದೇಶದ ರಾಜಕೀಯ ಇತಿಹಾಸದಲ್ಲಿ ತಿರುವು ನೀಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದರು. ನಿರೀಕ್ಷೆ ಮೀರಿ ಲಕ್ಷಾಂತರ ಜನ ಈ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.
BREAKING NEWS : ‘ಭಾರತ್ ಜೋಡೋ’ ಯಾತ್ರೆ ಹಿನ್ನೆಲೆ ಈ ಜಿಲ್ಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ