ಚಾಮರಾಜನಗರ : ‘ಭಾರತ್ ಜೋಡೋ’ ಯಾತ್ರೆ ಹಿನ್ನೆಲೆ ಚಾಮರಾಜನಗರ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಗೊಳಿಸಲಾಗಿದೆ.
ಇಂದು ಮದ್ಯರಾತ್ರಿಯಿಂದ ಅನ್ವಯವಾಗುವಂತೆ ಅ. 1ರವರೆಗೆ ಚಾಮರಾಜನಗರ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಲಾಗಿದೆ, ಕಟ್ಟು ನಿಟ್ಟಾಗಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.