ಸುಭಾಷಿತ :

Tuesday, January 28 , 2020 2:10 PM

ಉಪಚುನಾವಣೆ ಹಿನ್ನೆಲೆ : ಬೆಂಗಳೂರಿನಲ್ಲಿ ಇಂದಿನಿಂದ 1 ವಾರ ನಿಷೇಧಾಜ್ಞೆ


Monday, November 11th, 2019 8:17 am

ಬೆಂಗಳೂರು : ಬೆಂಗಳೂರು ವ್ಯಾಪ್ತಿಯಲ್ಲಿನ ನಾಲ್ಕು ಕ್ಷೇತ್ರಗಳಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ವಾರದ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಯಿಂದ ನಾಮಪತ್ರ ಸಲ್ಲಿಕೆ ಶುರುವಾಗಲಿದ್ದು, ನವೆಂಬರ್ 18 ರ ಸಂಜೆ 4 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ನಡುವೆ ನವೆಂಬರ್ 15 ರ ಕನಕ ಜಯಂತಿ, ನವೆಂಬರ್ 17 ರ ರವಿವಾರದಂದು ನಿಷೇಧಾಜ್ಞೆಯನ್ನು ಸಡಿಲಗೊಳಿಸುವುದಾಗಿ ಆಯುಕ್ತರು ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸುವ ಕಚೇರಿಗಳಾದ ಕೆ.ಆರ್.ಪುರ ಕ್ಷೇತ್ರದ ಕಂದಾಯ ಅಧಿಕಾರಿಗಳ ಕಚೇರಿ, ಯಶವಂತಪುರ ಕ್ಷೇತ್ರದ ಕೆಂಗೇರಿ ಉಪನಗರದ ಕರ್ನಾಟಕ ಬ್ಯಾಂಕ್ ಕಟ್ಟಡ, ಮಹಾಲಕ್ಷ್ಮೀ ಲೇಔಟ್ ಕ್ಷೆತ್ರದ ರಾಜಾಜಿನಗರ ಆರ್ ಟಿಒ ಕಚೇರಿ ಸಂಕೀರ್ಣ, ಶಿವಾಜಿನಗರದ ಕ್ವೀನ್ಸ್ ರಸ್ತೆಯ ಮತದಾರರ ನೋಂದಾಣಿಧಿಕಾರಿ ಕಚೇರಿಗಳ ಸುತ್ತಮುತ್ತ 1 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಕೈಗೊಳ್ಳಲಾಗಿದೆ.

ನಿಷೇಧಾಜ್ಞೆ ಸಂದರ್ಭದಲ್ಲಿ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವುದನ್ನು, ಪ್ರತಿಭಟನೆ, ಮೆರವಣಿಗೆ, ಸಭೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions