ಹಾಸನ: ಭವಾನಿ ರೇವಣ್ಣ ಅವರು 10 ತಿಂಗಳ ಬಳಿಕ ಹಾಸನಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗೆ ಆಗಮಿಸಿದಂತ ಅವರನ್ನು ಅಭಿಮಾನಿಗಳು, ಹಿತೈಶಿಗಳು ಹೂಮಳೆ ಸುರಿಸಿ, ಪಟಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತಿಸಿದರು.
ಹಾಸನ ಜಿಲ್ಲೆಯ ಹೊಳೆನರಸೀಪುರಕ್ಕೆ ಭವಾನಿ ರೇವಣ್ಣ ಇಂದು ಭೇಟಿ ನೀಡಿದರು. ಈ ವೇಳೆಯಲ್ಲಿ ಅವರಿಗೆ ಅಭಿಮಾನಿಗಳು ಹೂಮಳೆಯನ್ನು ಸುರಿಸಿ, ಪಟಾಕಿ ಸಿಡಿಸಿ, ಆರತಿ ಬೆಳಗಿ ಅದ್ಧೂರಿಯಾಗಿ ಸ್ವಾಗತಿಸಿದರು.
ಈ ವೇಳೆ ಮಾತನಾಡಿದಂತ ಅವರು ನಾನು ಹಾಸನಕ್ಕೆ ಬರೋದಕ್ಕೆ ಈಗ ಅವಕಾಶ ಸಿಕ್ಕಿದೆ. ನನ್ನ ಕೈಲಾದ ಸೇವೆ ಜನರಿಗಾಗಿ ಮಾಡುತ್ತೇನೆ. ನಾನು ಬರುವ ವಿಷಯ ಯಾರಿಗೂ ತಿಳಿಸಿರಲಿಲ್ಲ. ಆದರೂ ಸಾಕಷ್ಟು ಜನರು ಬಂದಿದ್ದೀರಿ. ನಿಮ್ಮ ಈ ಅಭಿಮಾನಕ್ಕೆ ನಾನು ಚಿರಋಣಿ ಎಂಬುದಾಗಿ ತಿಳಿಸಿದರು.
ರಾಜ್ಯ ಸರ್ಕಾರದಿಂದ ‘ಬೆಂಗಳೂರು ಜನತೆ’ಗೆ ಮತ್ತೊಂದು ಶಾಕ್: ‘ಘನತ್ಯಾಜ್ಯ ನಿರ್ವಹಣಾ ಶುಲ್ಕ’ ನಿಗದಿ
BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ