ಬೆಂಗಳೂರು: ಕೆ.ಆರ್.ನಗರದ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂಥೆ ಇಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶವನ್ನ ಹೊರಡಿಸಿದೆ. ಈ ನಡುವೆ ಶುಕ್ರವಾರ (ಇಂದು) ಮಧ್ಯಾಹ್ನ ಒಂದು ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿದೆ. ಕೋರ್ಟ್ ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶಿಸಿದೆ. ಇದೇ ವೇಳೆ ಹಾಸನ ಮತ್ತು ಕೆ.ಆರ್ ನಗರಕ್ಕೆ ಹೋಗುವಂತಿಲ್ಲ ಅಂಥ ತಿಳಿಸಿದೆ.
ಮಹಿಳೆಯ ಅಪಹರಣ ಪ್ರಕರಣದಲ್ಲಿ ತನಿಖೆಯ ಅಗತ್ಯವಿರುವುದರಿಂದ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿದೆ. ಮೇ 2ರಂದು ಕೆ.ಆರ್.ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮೇ 15ರಂದು ಎಸ್ಐಟಿ ಮೊದಲ ನೋಟಿಸ್ ನೀಡಿತ್ತು.