ಬೆಂಗಳೂರು: ಇಂದು ಸಂಜೆ 5 ಗಂಟೆಯ ಒಳಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳಿಂದ ಭವಾನಿ ರೇವಣ್ಣ ಅವರಿಗೆ ನೋಟಿಸ್ ನೀಡಲಾಗಿತ್ತು. ಹೀಗಿದ್ದರೂ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಮೈಸೂರಿನ 5 ಸ್ಥಳಗಳಲ್ಲಿ ಭವಾನಿ ರೇವಣ್ಣ ಅವರನ್ನು ಬಂಧನಕ್ಕಾಗಿ ಎಸ್ಐಟಿ ಪೊಲೀಸರು ಹುಟುಕಾಟ ನಡೆಸಿದ್ದಾರೆ.
ಹೌದು ಎಸ್ಐಟಿ ವಿಚಾರಣೆಗೆ ಭಾವನಿ ರೇವಣ್ಣ ಹಾಜರಾಗದ ಹಿನ್ನಲೆಯಲ್ಲಿ ಮೈಸೂರಿನ ಐದು ಸ್ಥಳಗಳಲ್ಲಿ ಭಾವನಿ ರೇವಣ್ಣಗೆ ಹುಡುಕಾಟ ನಡೆಸುತ್ತಿದ್ದಾರೆ. ಮೈಸೂರಿನ ಬೋಗಾದಿಯಲ್ಲಿರುವ ಭವಾನಿ ರೇವಣ್ಣ ಸಂಬಂಧಿಕರ ಮನೆ, ಹರೀಶ್ ಎಂಬುವವರ ಫಾರ್ಮ್ ಹೌಸ್ ನಲ್ಲಿ ಎಸ್ಐಟಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.
ನಿನ್ನೆಯಷ್ಟೇ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭವಾನಿ ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ಭವಾನಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿತ್ತು. ಈ ಬಳಿಕ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿತ್ತು. ಆದ್ರೇ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಭವಾನಿ ರೇವಣ್ಣ ಬಂಧನಕ್ಕೆ ಎಸ್ಐಟಿ ಅಧಿಕಾರಿಗಳು ಬಲೆ ಬೀಸಿದ್ದಾರೆ.
BREAKING: ಕೆಇಎಯಿಂದ ‘K-CET ಪರೀಕ್ಷೆ’ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ
ನನಗೆ ಯಾವುದೇ ‘Exit Poll’ ಮೇಲೆ ನಂಬಿಕೆಯಿಲ್ಲ: ಕರ್ನಾಟಕದಲ್ಲಿ ಕಾಂಗ್ರೆಸ್ 2 ಅಂಕಿ ದಾಟುತ್ತೆ: ಡಿಸಿಎಂ ಡಿಕೆಶಿ