ಬೀದರ್ : ಜಿಲ್ಲೆಯ ಬಸವಕಲ್ಯಾಣದಲ್ಲಿ ನೈತಿಕ ಪೊಲೀಸ್ಗಿರಿ ಘಟನೆ ನಡೆದಿದ್ದು, ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜತೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮೀಯ ಮಹಿಳೆ ಮೇಲೆ ಅದೇ ಧರ್ಮದ ಕೆಲ ಯುವಕರು ಹಲ್ಲೆ ಮಾಡಿದ್ದರು ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಘಟನೆ ಕುರಿತಂತೆ ಇದೀಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಇಂದು ಬೆಳಿಗ್ಗೆ ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮೀಯ ಮಹಿಳೆ ಮೇಲೆ ಅದೇ ಧರ್ಮದ ಕೆಲ ಯುವಕರು ಹಲ್ಲೆ ಮಾಡಿದ್ದರು.ವ್ಯಕ್ತಿ ಆಟೋ ಚಾಲಕನಾಗಿದ್ದು, ಈತನ ಜೊತೆಗೆ ನೀನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ, ಮುಸ್ಲಿಮರ ಹೆಸರು ಹಾಳು ಮಾಡುತ್ತೀಯಾ ಎಂದು ಕೆಲ ಮುಸ್ಲಿಂ ಯುವಕರು ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು.
ಸದ್ಯ ಪೊಲೀಸರು ಮೂವರನ್ನ ಬಂಧಿಸಿದ್ದಾರೆ.ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿದ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.