ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ಎಂಸಿ ಮೇರಿ ಕೋಮ್ ತಮ್ಮ ಬಾಕ್ಸಿಂಗ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಬುಧವಾರ ರಾತ್ರಿ ನಡೆದ ಕಾರ್ಯಕ್ರಮವೊಂದರಲ್ಲಿ ಮೇರಿ ತಮ್ಮ ನಿವೃತ್ತಿ ಘೋಷಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದಕ್ಕೆ ಇದೀಗ ಮೇರಿ ಕೊಮ್ ಅವರೇ ಸ್ಪಷ್ಟನೆ ನೀಡಿದ್ದು ನಾನು ಬಾಕ್ಸಿಂಗ್ ನಿವೃತ್ತಿ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ಸಾಮಾಜಿಕ ಜಾಲತಾಣದಲ್ಲಿ ಮೇರಿ ಕೋಮ್, ನನಗೆ ಇನ್ನೂ ಬಾಕ್ಸಿಂಗ್ ಆಡಲು ಆದೆ ಇದೆ ಆದರೆ ದುರದೃಷ್ಟವಶಾತ್ ವಯಸ್ಸಿನ ಮಿತಿ ಮುಗಿದಿರುವುದರಿಂದ, ನಾನು ಯಾವುದೇ ಸ್ಪರ್ಧೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎನ್ನುವ ತುದಿ ಹರಿಗಾಡಿತು ಇದೀಗ ಮೇರಿ ಕುಮಾರ್ ಸ್ಪಷ್ಟಣೆ ನೀಡಿದ್ದು ಯಾವುದೇ ರೀತಿಯಾಗಿ ನಿವೃತ್ತಿ ಹೊಂದಿಲ್ಲ ಎಂದು ತಿಳಿಸಿದ್ದಾರೆ.
6 ಬಾರಿ ವಿಶ್ವ ಚಾಂಪಿಯನ್:
ಮೇರಿ ಕೋಮ್ 6 ಬಾರಿ ವಿಶ್ವ ಚಾಂಪಿಯನ್ ಕಿರೀಟ ತಮ್ಮದಾಗಿಸಿಕೊಂಡಿದ್ದರು. ನಿಖರ ಪಂಚ್ಗಳಿಗೆ ಹೆಸರುವಾಸಿಯಾಗಿದ್ದ ಕೋಮ್ ಈ ಸಾಧನೆ ಮಾಡಿದ ಏಕೈಕ ಮಹಿಳಾ ಬಾಕ್ಸರ್ ಎಂಬುದು ವಿಶೇಷ. ಇದಲ್ಲದೆ 5 ಬಾರಿ ಏಷ್ಯನ್ ಚಾಂಪಿಯನ್ಶಿಪ್ ಗೆದ್ದ ಏಕೈಕ ಆಟಗಾರ್ತಿ ಎಂಬ ದಾಖಲೆ ಕೂಡ ಮೇರಿ ಕೋಮ್ ಹೆಸರಿನಲ್ಲಿದೆ.