ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎನ್‌ಎಸ್‌ಜಿ ಕಮಾಂಡೋಸ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬ್ಲಾಸ್ಟ್ ಪ್ರಕರಣದ ಕುರಿತು ಹೆಚ್‌ಎಎಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ : ಇದರಲ್ಲಿ ‘ಬಿಜೆಪಿ’ ರಾಜಕೀಯ ಮಾಡುವುದು ಸರಿಯಲ್ಲ : ಸಿಎಂ ಸಿದ್ದರಾಮಯ್ಯ ಕಿಡಿ
ಐಪಿಸಿ ಸೆಕ್ಷನ್ 307 , 471 ಮತ್ತು ಯುಎಪಿಯ 16 (ಭಯೋತ್ಪಾದಕ ಕೃತ್ಯ), 18 (ಪಿತೂರಿ) ಹಾಗೂ 38 (ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಅಪರಾಧ) ಮತ್ತು ಎಕ್ಸ್ಪ್ಲೋಸಿವ್ ಸಬ್ಸ್ಟೆನ್ಸ್ ಆಯಕ್ಟ್ 3 (ಜೀವಕ್ಕೆ ಅಥವಾ ಆಸ್ತಿಗೆ ಅಪಾಯನ್ನುಂಟುಮಾಡುವ ಸ್ಫೋಟ) ಮತ್ತು 4 (ಜೀವಕ್ಕೆ ಹಾನಿಯುಂಟುಮಾಡುವ ಉದ್ದೇಶದಿಂದ ಸ್ಫೋಟಕ ತಯಾರಿಕೆ) ಸೆಕ್ಷನ್ ಅಡಿಯಲ್ಲಿ FIR ದಾಖಲಾಗಿದೆ.
ಕೆಫೆಯಲ್ಲಿ ‘ಬಾಂಬ್ ಸ್ಫೋಟ’ ಪ್ರಕರಣ:ಇಂದು ಪೋಲಿಸ್ ಅಧಿಕಾರಿಗಳ ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ನಿನ್ನೆ ಮಧ್ಯಾಹ್ನ ಕೆಫೆಯಲ್ಲಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಒಟ್ಟು 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಫೆಯ ಒಳಗಡೆ ಸ್ಫೋಟಕವನ್ನು ಇರಿಸಿ ಬಳಿಕ ಬೈಕ್‌ನಲ್ಲಿ ತೆರಳಿದ್ದ ಶಂಕಿತನ ಬೈಕ್ ಮಾಹಿತಿಯನ್ನು ಆಧರಿಸಿ ಆತನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಶನಿವಾರ ರಾತ್ರಿ 5 ಕರಿಮೆಣಸು ಕಾಳು ಎಸೆಯಿರಿ ಹಣದ ಸಮಸ್ಯೆ ಪರಿಹಾರ ಆಗಲಿದೆ