ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಈ ಮೇಲ್ ಸಂದೇಶ ಬಂದಿದೆ. ಹೌದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಇಮೇಲ್ ಐಡಿಗೆ ಅಪರಿಚಿತ ಇ-ಮೇಲ್ ನಿಂದ ಬೆದರಿಕೆ ಸಂದೇಶ ಬಂದಿದ್ದು ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ.
ಇನ್ನು ಬೆಂಗಳೂರು ನಗರದಾದ್ಯಂತ ಈ ಹಿಂದೆ ಶಾಲಾ ಕಾಲೇಜುಗಳಿಗೆ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಬಾಂಬ್ ಬೆದರಿಕೆ ಸಂದೇಶ ಕುರಿತಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದಲ್ಲಿ ಎಸ್ಐಟಿ ರಚನೆ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೊಂದು ಬಾಂಬ್ ಬೆದರಿಕೆ ಸಂದೇಶ ಬಂದಿದೆ.