ಬೆಂಗಳೂರು : ಇತ್ತೀಚಿಗೆ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಹಲವು ವಿಧೇಯಕ ಮಂಡನೆ ಮಾಡಿತ್ತು. ಬಳಿಕ ರಾಜ್ಯಪಾಲರು ಅನೇಕ ವಿಧೇಯಕಕ್ಕೆ ಅಂಕಿತ ಹಾಕದೆ ವಾಪಾಸ್ ಕಳಿಸಿದ್ದರು. ಅದರಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಕೂಡ ಒಂದು ಇದೀಗ ರಾಜ್ಯಪಾಲರು ಈ ಒಂದು ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ನಿರ್ಮಾಣಕ್ಕಾಗಿ ಮಂಡಿಸಲಾಗಿರುವ ಗ್ರೇಟರ್ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಅಂಕಿತ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ಕಳುಹಿಸಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿತ್ತು. ಆ ವಿಧೇಯಕಕ್ಕೆ ಅಂಕಿತ ಹಾಕದೇ ಕಳೆದ ತಿಂಗಳು ರಾಜ್ಯಪಾಲರು ವಾಪಸ್ ಕಳುಹಿಸಿದ್ದರು. ಗ್ರೇಟರ್ ಬೆಂಗಳೂರು ವಿಧೇಯಕದಲ್ಲಿನ ಅಂಶಗಳು ಜಾರಿಯಾದರೆ, ಬೆಂಗಳೂರು ಒಡೆದುಹೋಗುತ್ತದೆ. ಪರಭಾಷಿಕರಿಗೆ ಹೆಚ್ಚಿನ ಆದ್ಯತೆ ಸಿಗುತ್ತದೆ ಎಂಬಿತ್ಯಾದಿ ಆರೋಪಗಳನ್ನು ಮಾಡುತ್ತಿರುವ ವಿಪಕ್ಷದ ಸದಸ್ಯರು ಇದನ್ನು ವಿರೋಧಿಸುತ್ತಲೇ ಬಂದಿದ್ದಾರೆ.