ಯಾದಗಿರಿ : ರಾಜ್ಯದಲ್ಲಿ ಬಡವರಿಗಾಗಿ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ಮೂಲಕ ಅಕ್ಕಿ ವಿತರಿಸುತ್ತಿದೆ. ಆದರೆ ಅದೇ ಅಕ್ಕಿಯನ್ನ ಅಕ್ರಮವಾಗಿ ಮಾರಾಟ ಮಾಡುವ ದಂಧೆ ಕೂಡ ನಡೆಯುತ್ತಿದೆ. ಒಂದು ಕಡೆ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಮಾರಾಟ ಮಾಡುವ ಕುರಿತಾಗಿ ಎರಡು ಕೋಟಿ ರೂಪಾಯಿ ಮೌಲ್ಯದ ಅಕ್ಕಿ ಕಳ್ಳತನದ ಬಗ್ಗೆ ಈಗಾಗಲೇ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
ಇದರ ಮಧ್ಯೆ ಯಾದಗಿರಿ ಜಿಲ್ಲೆಯಲ್ಲಿ ಸುಮಾರು 69 ಸಾವಿರಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಗೂಡ್ಸ್ ವಾಹನದ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ಕಿಯನ್ನು ಜಪ್ತಿ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ 69 ಸಾವಿರ ಮೌಲ್ಯದ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಅಕ್ಕಿ ಕಳ್ಳತನ ಪ್ರಕರಣದ ತನಿಖೆ ನಡೆಯುತ್ತಿರುವ ವೇಳೆಯೇ ಈ ಒಂದು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಎರಡು ಕೋಟಿ ಮೌಲ್ಯದ ಅಕಿ ಕಳ್ಳತನದ ಬಗ್ಗೆ ತನಿಖೆ ನಡೆಯುತ್ತಿದೆ.
ಯಾದಗಿರಿ ಜಿಲ್ಲೆಯಾದ್ಯಂತ ಅಕ್ರಮವಾಗಿ ಪಡಿತರಾಗಿ ಸಾಗಾಟ ದಂದೆ ನಡೆಯುತ್ತಿದ್ದಿದ್ದು, ಸುರಪುರದಿಂದ ಲಿಂಗಸೂರಿಗೆ ಪಡಿತರ ಅಕ್ಕಿ ಸಾಗಾಟ ಮಾಡಲಾಗುತ್ತಿರುವ ಕುರಿತಂತೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಕೆಎ 36 ಸಿ 3502 ಸಂಖ್ಯೆಯ ಒಂದು ಟಾಟಾ ಗೂಡ್ಸ್ ವಾಹನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.ತಕ್ಷಣ ಚಾಲಕ ನಂದೇಶ್ ಅಲ್ಲಿಂದ ಪರಾರಿಯಾಗಿದ್ದಾನೆ. ಇದೆ ವೇಳೆ ಚಾಲಕನು ಲಿಂಗಸೂಗೂರು ತಾಲೂಕಿನ ಗುರುಗುಂಟ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.