ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 19 ಮಂದಿ ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಶಿಕ್ಷಣ ಸಂಸ್ಥೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 19 ಸಾವು, 29 ಮಂದಿ ಗಾಯಗೊಂಡಿದ್ದಾರೆ.
ಆರಂಭಿಕ ವರದಿಗಳ ಪ್ರಕಾರ, ಕಾಜ್ ಶಿಕ್ಷಣ ಕೇಂದ್ರದಲ್ಲಿ ನಡೆದ ದಾಳಿಯಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಮೂಲದ ಮಾಧ್ಯಮ ಸಂಸ್ಥೆ ಟೊಲೊ ನ್ಯೂಸ್ ಟ್ವಿಟರ್ನಲ್ಲಿ ತಿಳಿಸಿದೆ. ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯ ಸಲುವಾಗಿ ಕೇಂದ್ರಕ್ಕೆ ಬಂದಿದ್ದರು ಎಂದು ಕಾಬೂಲ್ ಭದ್ರತಾ ಕಮಾಂಡ್ನ ವಕ್ತಾರ ಖಲೀದ್ ಜದ್ರಾನ್ ಹೇಳಿದ್ದಾರೆ.