ನವದೆಹಲಿ: 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಮಧ್ಯಂತರ ಜಾಮೀನನ್ನು ನವೆಂಬರ್ 15 ರವರೆಗೆ ವಿಸ್ತರಿಸಿದೆ ಎನ್ನಲಾಗಿದೆ.
200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಜಾಮೀನು ಅರ್ಜಿಯ ಬಗ್ಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಇಂದು ಆದೇಶವನ್ನು ಪ್ರಕಟಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ದೊಡ್ಡ ನಿರ್ಧಾರ ಹೊರಬೀಳಲಿದೆ. ದೀಪಾವಳಿಗೂ ಮುನ್ನ 200 ಕೋಟಿ ರೂ.ಗಳ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ಗೆ ನವೆಂಬರ್ 10 ರವರೆಗೆ ನ್ಯಾಯಾಲಯ ಕಾಲಾವಕಾಶ ನೀಡಿತ್ತು. ಗುರುವಾರ ದೆಹಲಿಯ ಪಟಿಯಾಲಾ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ಇಂದು ನಡೆಯಿತು.