ನವದೆಹಲಿ: ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಕ್ರಮ ಮುಂದುವರಿದಿದೆ. ಮಂಗಳವಾರದ ದಾಳಿಯ ನಂತರ, ದೆಹಲಿಯ ನ್ಯಾಷನಲ್ ಹೆರಾಲ್ಡ್ ಕಚೇರಿಯಲ್ಲಿರುವ ಯುವ ಭಾರತೀಯ ಕಂಪನಿಯ ಆವರಣವನ್ನು ಇಡಿ ತಾತ್ಕಾಲಿಕವಾಗಿ ಮುಚ್ಚಿದೆ. ಸದ್ಯಕ್ಕೆ ಅನುಮತಿ ಪಡೆದ ನಂತರವೇ ಆವರಣವನ್ನು ತೆರೆಯಬಹುದು ಎಂದು ಸಂಸ್ಥೆ ಹೇಳಿದೆ.
ಸೋನಿಯಾ, ರಾಹುಲ್ ಗಾಂಧಿಗೆ ಸೇರಿದ್ದ ಸರಿ ಸುಮಾರು 100 ಕೋಟಿ ಮೌಲ್ಯದ ಆಸ್ತಿ ಕೂಡ ED ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.
ದೇಶದಲ್ಲಿ ಅಲ್ಲೋಲ ಕಲ್ಲೋಲವನ್ನು ಸೃಷ್ಠಿಸಿದ್ದಂತ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ, ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ಇದೇ ಪ್ರಕರಣದಲ್ಲಿ ಈಗಾಗಲೇ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಸರಣಿ ವಿಚಾರಣೆಯನ್ನು ಇಡಿ ಅಧಿಕಾರಿಗಳು ನಡೆಸಿದ್ದರು.
ಇದಲ್ಲದೇ ಕಾಂಗ್ರೆಸ್ ನ ಸಾಲು ಸಾಲು ನಾಯಕರನ್ನು ಇಡಿ ವಿಚಾರಣೆ ನಡೆಸಿತ್ತು. ಹೀಗಾಗಿ ಇಡಿ ಕಿರುಕುಳ ವಿರೋಧಿಸಿ ಕಾಂಗ್ರೆಸ್ ನಿಂದ ದೇಶಾದ್ಯಂತ ಪ್ರತಿಭಟನೆ ಕೂಡ ನಡೆಸಲಾಗಿತ್ತು.